ಉಡುಪಿ: ಗುಜರಿ ಸಾಮಗ್ರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿ; ಆರು ಮಂದಿಗೆ ಗಾಯ

ಉಡುಪಿ: ಗುಜರಿ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಲಾರಿಯಲ್ಲಿದ್ದ ಕಾರ್ಮಿಕರು ಸಹಿತ ಆರು ಮಂದಿ ಗಾಯಗೊಂಡ ಘಟನೆ ಭಾನುವಾರ ಉಡುಪಿ ಅಂಬಾಗಿಲು ಬಳಿಯ ರಾ.ಹೆ.66ರಲ್ಲಿ ಸಂಭವಿಸಿದೆ. ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ತತ್‌ಕ್ಷಣ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಲಾರಿ ಚಾಲಕ, ನಾಲ್ಕು ಮಂದಿ ಕಾರ್ಮಿಕರು ಹಾಗೂ ಬೈಕ್‌ ಸವಾರನನ್ನು ತಮ್ಮ ವಾಹನದಲ್ಲಿಯೇ ಕರೆದೊಯ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ದುರ್ಘಟನೆ ಸಂಭವಿಸುವ ಮುಂಚೆ ಅದೇ ಸ್ಥಳದಲ್ಲಿ […]