ಉಡುಪಿ: ಇನ್ನೋವಾ ಕಾರಿಗೆ ಮದುವೆ ದಿಬ್ಬಣದ ಅಲಂಕಾರ ಮಾಡಿ ಅಕ್ರಮ ಗೋಸಾಗಾಟ; ಹಿಂದೂ ಸಂಘಟನೆಯ ಕಾರ್ಯಕರ್ತರಿಂದ 10 ಗೋವುಗಳ ರಕ್ಷಣೆ
ಉಡುಪಿ: ಇನ್ನೋವ ಕಾರಿಗೆ ಮದುವೆ ದಿಬ್ಬಣದ ಅಲಂಕಾರ ಮಾಡಿ ಹಿಂಸಾತ್ಮಕವಾಗಿ ಗೋವುಗಳನ್ನು ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ 10 ಗೋವುಗಳನ್ನು ರಕ್ಷಣೆ ಮಾಡಿರುವ ಕಾಪು ತಾಲೂಕಿನ ಶಿರ್ವದಲ್ಲಿ ಬುಧವಾರ ನಸುಕಿನ ವೇಳೆ ನಡೆದಿದೆ. ಮಂಗಳವಾರ ತಡರಾತ್ರಿ ಪೆರ್ಡೂರಿನಿಂದ ಮಂಗಳೂರಿಗೆ ಇನ್ನೋವಾ ಹಾಗೂ ಪಿಕಪ್ ವಾಹನದಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದು ತಕ್ಷಣವೇ ಕಾರ್ಯಾಚರಣೆಗೆ ಇಳಿದ ಹಿಂದು ಸಂಘಟನೆಯ ಕಾರ್ಯಕರ್ತರು ವಾಹನಗಳನ್ನು ಹಿಂಬಾಲಿಸಿಕೊಂಡು ಹೋಗಿ ಶಿರ್ವದ ಬಳಿ ತಡೆದಿದ್ದಾರೆ. […]