ಉಡುಪಿ: ವೀಕೆಂಡ್ ಕರ್ಫ್ಯೂ; ಬಸ್ ಸಂಚಾರ ಬಹುತೇಕ ಬಂದ್.!
ಉಡುಪಿ: ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರುವುದರಿಂದ ಖಾಸಗಿ ಬಸ್ ಸಂಚಾರ ಬಹುತೇಕ ಬಂದ್ ಆಗಲಿದೆ. ಬಸ್ ಪ್ರಯಾಣಕ್ಕೆ ಅನುಮತಿ ಇದ್ದರೂ ಜನಸಂಚಾರ ಕಡಿಮೆ ಇರುವುದರಿಂದ ಎಲ್ಲ ಬಸ್ಸುಗಳು ಸಂಚರಿಸುವುದಿಲ್ಲ. ಕೆಲವೊಂದು ಬಸ್ಸುಗಳು ಸಂಚರಿಸುವ ಸಾಧ್ಯತೆ ಇದೆ. ಉಡುಪಿ ಸಿಟಿ ಬಸ್ ಮತ್ತು ಕೆನರಾ ಬಸ್ ಮಾಲೀಕರ ಸಂಘದ ಬಸ್ ಗಳ ಸಂಚಾರ ಇರುವುದಿಲ್ಲ ಎಂದು ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಮತ್ತು ಕೆನರಾ ಬಸ್ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ […]
ಉಡುಪಿ: ವೀಕೆಂಡ್ ಕರ್ಪ್ಯೂ; ಏನಿದೆ.?, ಏನಿಲ್ಲ.?
ಉಡುಪಿ: ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರಾಜ್ಯಾದ್ಯಂತ ಶನಿವಾರ ಹಾಗೂ ಭಾನುವಾರ ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಿದೆ. ಈ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಯಾವುದಕ್ಕೆಲ್ಲ ಅವಕಾಶವಿದೆ.? ಯಾವುದಕ್ಕಿಲ್ಲ? ಎಂಬುವುದರ ಕುರಿತು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟನೆ ನೀಡಿದ್ದಾರೆ. ಯಾವುದೆಲ್ಲ ಬಂದ್: ಸಿನೆಮಾ ಹಾಲ್‍ಗಳು, ಶಾಪಿಂಗ್ ಮಾಲ್‍ಗಳು, ಜಿಮ್ ಗಳು, ಯೋಗ ಕೇಂದ್ರಗಳು, ಸ್ಪಾಗಳು, ಕ್ರೀಡಾ ಸಂಕೀರ್ಣಗಳು, ಸ್ಟೇಡಿಯಂ, ಈಜುಕೊಳಗಳು, ಮನರಂಜನೆ / ಮನೋರಂಜನಾ ಉದ್ಯಾನಗಳು, ಕ್ಲಬ್, ಬಾರ್ ಗಳು, ಸಭಾಂಗಣಗಳು, ಅಸೆಂಬ್ಲಿ ಹಾಲ್‍ಗಳು […]