ಉಡುಪಿ: ನೂತನ ನ್ಯಾಯಾಧೀಶರಿಗೆ ಸ್ವಾಗತ ಕಾರ್ಯಕ್ರಮ

ಉಡುಪಿ: ಉಡುಪಿ ವಕೀಲರ ಸಂಘದ ವತಿಯಿಂದ ಉಡುಪಿ ನ್ಯಾಯಾಲಯಗಳಿಗೆ ವರ್ಗಾವಣೆಗೊಂಡು ಆಗಮಿಸಿರುವ ನೂತನ ನ್ಯಾಯಾಧೀಶರಿಗೆ ಸ್ವಾಗತ ಕಾರ್ಯಕ್ರಮವನ್ನು ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ನೂತನ ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ಕೆ.ಎಸ್ ಜ್ಯೋತಿಶ್ರೀ, ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಗಗನ್ ಎಂ.ಆರ್., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ನಾಗೇಶ್ ಎಂ.ಎ. ಅವರನ್ನು ಅಭಿನಂದಿಸಲಾಯಿತು. ಬಳಿಕ ಮಾತನಾಡಿದ ನ್ಯಾಯಾಧೀಶೆ ಜ್ಯೋತಿಶ್ರೀ, ಉಡುಪಿ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯದಲ್ಲಿ ಕೇವಲ 240 ಪ್ರಕರಣಗಳಿವೆ. ಇತರ […]