ಉಡುಪಿ: ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆ ಮೃತ್ಯು; ವೈದ್ಯರ ವಿರುದ್ಧ ಕುಟುಂಬಸ್ಥರ ಪ್ರತಿಭಟನೆ
ಉಡುಪಿ: ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದರು. ಕುಂದಾಪುರದ ಉಷಾ (26) ಎಂಬವರು ಮೃತಪಟ್ಟ ಗರ್ಭಿಣಿ. ಇವರು ಸೆ. 23ರಂದು ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಶನಿವಾರ ಬೆಳಿಗ್ಗೆ ಶಸ್ತ್ರಚಿಕಿತ್ಸೆ ನಡೆಸಿ ಮಗುವನ್ನು ಹೊರ ತೆಗೆಯಲಾಗಿತ್ತು. ಈ ವೇಳೆ ತಾಯಿಯ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.