ಕಠಿಣ ಪರಿಶ್ರಮ, ಶೃದ್ಧೆಯಿಂದ ಸಾಧನೆ ಸಾಧ್ಯ; ಡಾ. ಚಿಲ್ಲಾಕೂರ್ ಸುಮಲತಾ

ಉಡುಪಿ: ಕಾನೂನು ಕ್ಷೇತ್ರದಲ್ಲಿ ಮಹಿಳೆಯರಿಗೆ ಹಲವಾರು ಅವಕಾಶಗಳಿದ್ದು ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕಠಿಣ ಪರಿಶ್ರಮ, ಶೃದ್ಧೆಯಿಂದ ಸಾಧನೆ ಮಾಡಲು ಸಾಧ್ಯವಿದೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಡಾ. ಚಿಲ್ಲಾಕೂರ್ ಸುಮಲತಾ ಹೇಳಿದ್ದಾರೆ.ಉಡುಪಿ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರಲ್ಲಿ ಛಲವೊಂದಿದ್ದರೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಿದೆ. ಇದು ಸ್ಪರ್ಧಾತ್ಮಕ ಕ್ಷೇತ್ರವಾಗಿದ್ದು, ಎಲ್ಲರನ್ನೂ ಸಮಾನವಾಗಿ ಪ್ರೋತ್ಸಾಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ […]