ಉಡುಪಿ:ಕೆಲಸ ಕಾರ್ಯಗಳಿಗೆ ಕಾರ್ಮಿಕರನ್ನು ನಿಯೋಜಿಸುವ ಮೊದಲು ಅವರ ಸೂಕ್ತ ದಾಖಲೆ ಪಡೆಯಬೇಕು: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲೀಕರು ಅವರ ಗುರುತಿನ ಚೀಟಿ, ಶಾಶ್ವತ ಹಾಗೂ ತಾತ್ಕಲಿಕ ವಾಸ ಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಈ ವಿವರಗಳನ್ನು ಸಂಬಂಧಿಸಿದ ಸರ್ಕಾರಿ ಕಛೇರಿಗಳಿಗೆ ತಪ್ಪದೇ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಕ್ರಮ ಬಾಂಗ್ಲಾದೇಶೀಯ ವಲಸೆ ಕಾರ್ಮಿಕರಿಗೆ ಹಾಗೂ ನಾಗರೀಕರಿಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳ ಮೂಲಕ ಜಿಲ್ಲೆಯ ಜನರನ್ನು ಜಾಗೃತಗೊಳಿಸುವ ಕುರಿತ ಸಭೆಯಲ್ಲಿ ಮಾತನಾಡುತ್ತಿದ್ದರು. […]