ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಪಂ ಪಿಡಿಒ, ನೌಕರರಿಂದ ಮುಷ್ಕರ

ಉಡುಪಿ: ಅಕ್ಟೋಬರ್ 4 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಗ್ರಾಮ ಪಂಚಾಯಿತಿಗಳ ಸೇವೆಯನ್ನು ಸ್ಥಗಿತಗೊಳಿಸಿ ನಡೆಸುತ್ತಿರುವ ಮುಷ್ಕರ ಜಿಲ್ಲಾ ಕೇಂದ್ರಗಳಿಗೆ ಸ್ಥಳಾಂತರಗೊಂಡಿದೆ. ಇಂದಿನಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಗ್ರಾಪಂ ಪಿಡಿಒ ಹಾಗೂ ಪಂಚಾಯತ್ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಉಡುಪಿ ಜಿಲ್ಲೆಯ ಎಲ್ಲ 155 ಗ್ರಾಮ ಪಂಚಾಯಿತಿಯ ನೌಕರರು ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿಯ ಸದಸ್ಯರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಇದರಿಂದಾಗಿ ಜಿಲ್ಲೆಯ ಬಹುತೇಕ ಪಂಚಾಯತ್ ಗಳಲ್ಲಿ ಜನರ ಸೇವೆ […]