ಉಡುಪಿ:ಮದ್ಯದಂಗಡಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ ಕುರಿತು ಕಾರ್ಯಾಗಾರ

ಉಡುಪಿ: ಸರ್ಕಾರದ ಅಬಕಾರಿ ಇಲಾಖೆಯಲ್ಲಿ ಸ್ಥಗಿತಗೊಂಡಿರುವ ಹಾಗೂ ಮಂಜೂರಾಗದೇ ಬಾಕಿ ಉಳಿದಿರುವ ಅಬಕಾರಿ ಸನ್ನದುಗಳ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಹರಾಜಿನಲ್ಲಿ ಪಾರದರ್ಶಕತೆ ಕಾಪಾಡುವುದರೊಂದಿಗೆ ಬಿಡ್ಡುದಾರರಿಗೆ ತಾಂತ್ರಿಕ ಮಾಹಿತಿ ನೀಡಲು ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ. ಬಿಡ್‌ದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಹೆಚ್. ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಅಬಕಾರಿ ಇಲಾಖೆ ವತಿಯಿಂದ ಐದು ವರ್ಷಗಳ […]