ವ್ಯಸನ ಮುಕ್ತ ಸಮಾಜಕ್ಕೆ ಪ್ರತಿಯೊಬ್ಬರೂ ಸ್ವಯಂ ಪ್ರೇರಿತವಾಗಿ ಕೈಜೋಡಿಸಿ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ. ಜಿ.ಎಸ್

ಉಡುಪಿ: ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಜೊತೆಗೆ ಸ್ವಯಂ ಪ್ರೇರಿತರಾಗಿ ಮಾದಕ ವಸ್ತುಗಳ ಸೇವನೆಯನ್ನು ವಿರೋಧಿಸುವ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಜೂ.೨೬ ರಂದು ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯು.ಜಿ.ಸಭಾಂಗಣದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ, ಜಿಲ್ಲಾಡಳಿತ, […]