ಉಡುಪಿ:ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಹೊಣೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಮನುಷ್ಯ ಸೇರಿದಂತೆ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಸಂಕುಲವೂ ಪರಿಸರವನ್ನು ಅವಲಂಭಿಸಿದೆ.ಮಾನವನ ದುರಾಸೆಯಿಂದ ಗಾಳಿ, ನೀರು ಸೇರಿದಂತೆ ಸೇವಿಸುವ ಆಹಾರವು ಕಲುಷಿತವಾಗುತ್ತಿದೆ. ಪರಿಸರದ ರಕ್ಷಣೆಗೆಉತ್ತೇಜಿಸುವುದರೊಂದಿಗೆ ಉತ್ತಮ ಪರಿಸರದ ಮಹತ್ವವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ […]