ಉಡುಪಿ:ಡಿ.29 ರಂದು ವಿಶ್ವ ಮಾನವ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟçಕವಿ ಕುವೆಂಪು ರವರ ಜಯಂತಿ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವು ಡಿಸೆಂಬರ್ 29 ರಂದು‌ ಬೆಳಗ್ಗೆ 10 ಗಂಟೆಗೆ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್) ಜನತಾ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. […]