ರಂಗಭೂಮಿ ಉಡುಪಿ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ

ಉಡುಪಿ: ಯಾವುದೇ ಕಲಾಪ್ರಕಾರಗಳು ಉಳಿದು ಬೆಳೆಯಬೇಕಾದರೆ ಯುವಜನತೆ ಅದರಲ್ಲಿ ತೊಡಗಿಸಿ ಕೊಳ್ಳುವುದು ಅತೀ ಮುಖ್ಯ. ಈ ನಿಟ್ಟಿನಲ್ಲಿ ರಂಗ ಭೂಮಿ ಉಡುಪಿ ನಾಟಕಗಳತ್ತ ವಿದ್ಯಾರ್ಥಿಗಳನ್ನು, ಯುವಕರನ್ನು ಸೆಳೆಯುವ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯ ಎಂದು ಮಣಿಪಾಲ ಮಾಹೆಯ ಸಹ ಕುಲಾಧಿಪತಿ ಡಾ. ಎಚ್. ಎಸ್ ಬಲ್ಲಾಳ್ ಹೇಳಿದರು. ಅವರು ಗುರುವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ […]