ಉಡುಪಿ:ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ “ವಿಶ್ವಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಇಂದು ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್‌ನಲ್ಲಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ ಪೂರಕವಾಗುವ ಚಟುವಟಿಕೆಗಳನ್ನು ಕೈಗೊಳ್ಳುವ ಜೊತೆಗೆ ಸ್ಥಳೀಯಜನರಿಗೆ ಉದ್ಯೋಗ ಅವಕಾಶಗಳು ದೊರೆಯುವಂತೆ ಯೋಜನೆಗಳನ್ನು ರೂಪಿಸಬೇಕು. ಜಿಲ್ಲೆಯ ಪ್ರವಾಸಿ ತಾಣಗಳತ್ತ ಪ್ರವಾಸಿಗರು ಆಕರ್ಷಿತರಾಗುವಂತೆ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಬೇಕು ಎಂದರು. ಹೊಸ ಬೀಚಿನ ಅಭಿವೃದ್ಧಿಯ ದೃಷ್ಠಿಕೋನದೊಂದಿಗೆ ಕೋಡಿ ಕನ್ಯಾನ ಬೀಚಿನಲ್ಲಿ […]