ಉಡುಪಿ:ಲಿಖಿತ ಪರೀಕ್ಷೆ : ಪ್ರತಿಬಂಧಕಾಜ್ಞೆ ಜಾರಿ-ಡಾ. ಕೆ.ವಿದ್ಯಾಕುಮಾರಿ ಆದೇಶ.

ಉಡುಪಿ: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯಶಿಕ್ಷಕರು ಹಾಗೂ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜೂನ್ 15 ರಿಂದ 17 ರ ವರೆಗೆ ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ಪರೀಕ್ಷೆ ಸಂದರ್ಭದಲ್ಲಿನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲೂ ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, […]