ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿ ಪ್ರಕಟ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಒಬ್ಬರನ್ನು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ 5 ಜನರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಹಾಗೂ 10 ಜನ ಗಣ್ಯರನ್ನು ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ. ತೆಂಕುತಿಟ್ಟು ಯಕ್ಷಗಾನ ಕಲಾವಿದರಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಇವರನ್ನು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು. ಉಡುಪಿ ಪತ್ರಿಕಾ ಭವನದಲ್ಲಿ 2024ನೇ ಸಾಲಿನ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಹೆಸರು ಪ್ರಕಟಿಸಿದ ಅವರು, ಪಾರ್ತಿಸುಬ್ಬ […]