ಉಡುಪಿ: ಮೇ 31ರಂದು ‘ಯಕ್ಷಗಾನ ಕಲಾವಿದರ ಸಮಾವೇಶ’

ಉಡುಪಿ: ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ‘ಯಕ್ಷಗಾನ ಕಲಾವಿದರ ಸಮಾವೇಶ’ ಇದೇ ಮೇ 31ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಂಗಾಧರ್ ರಾವ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಾಯೋಜಕತ್ವದಲ್ಲಿ ಬೆಳಿಗ್ಗೆ 9ಗಂಟೆಗೆ ಕಲಾವಿದರಿಗೆ ಕೆಎಮ್‌ಸಿ ಮಣಿಪಾಲ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಯಲಿದೆ. ಬೆಳಿಗ್ಗೆ 10ಗಂಟೆಗೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಬಳಿಕ 10.30ಕ್ಕೆ ಮಾಧವ ಮಾತೃ ಗ್ರಾಮಂ […]