ಯಕ್ಷಗಾನಕ್ಕೆ ಸಂಘಸಂಸ್ಥೆಗಳ ಪ್ರೋತ್ಸಾಹ ಅಗತ್ಯ: ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಇಂದು ಯಕ್ಷಗಾನಕ್ಕೆ ಅನೇಕ ಸಂಘಸಂಸ್ಥೆಗಳು ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ಇದು ಅಕಾಡೆಮಿಯ ಕೆಲಸವನ್ನು ಬಹಳಷ್ಟು ಹಗರುವಾಗಿಸಿದೆ. ಮಕ್ಕಳ ಯಕ್ಷಗಾನ, ಮಹಿಳಾ ಯಕ್ಷಗಾನ ಸಂಸ್ಥೆಗಳು ಇದೀಗ ಹೆಚ್ಚಾಗಿ ಆರಂಭಗೊಳ್ಳುತ್ತಿರುವುದು ಯಕ್ಷಗಾನ ಕಲೆಯ ಭವಿಷ್ಯ ಭದ್ರವಾಗಿದೆ ಎಂಬುದನ್ನು ಸೂಚಿಸುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಕಾರ್ಕಳ ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ […]