ಉಡುಪಿ: ನ.17ರಂದು “ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಯಕ್ಷಗಾನ ಕಲಾರಂಗ ಉಡುಪಿ ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 2024ನೇ ಸಾಲಿನ “ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ” ಇದೇ ನ.17ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿಯ ಶಾರದಾ ಮಂಟಪ ರಸ್ತೆಯಲ್ಲಿರುವ ಯಕ್ಷಗಾನ ಕಲಾರಂಗದ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ಮೆಂಟ್, ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]