ಉಡುಪಿ: ನ.23ರಂದು ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಉಡುಪಿ ಯಕ್ಷಗಾನ ಕಲಾರಂಗದ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 23ರಂದು ಸಂಜೆ 4.30ಕ್ಕೆ ಉಡುಪಿಯ ಶಾರದಾ ಮಂಟಪ ರಸ್ತೆಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ ನ ಅಧ್ಯಕ್ಷ ಡಾ. […]