ಮಕ್ಕಳು, ಮಹಿಳೆಯರು ಕಲಿತರಷ್ಟೇ ಯಕ್ಷಗಾನ ಉಳಿವು: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಯಕ್ಷಗಾನ ಉಳಿದು ಬೆಳೆಯಬೇಕಾದರೆ ಮಕ್ಕಳಿಗೆ ಹಾಗೂ ಕಲಾ ಸಂಘಟನೆ ಆಗಬೇಕಾದರೆ ಮಹಿಳೆಯರಿಗೆ ಯಕ್ಷಗಾನ ಕಲಿಸುವಿಕೆಗೆ ಒತ್ತು ನೀಡುವ ಅಗತ್ಯವಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಕಾರದಲ್ಲಿ ಬೆಂಗಳೂರಿನ ರಂಗಸ್ಥಳ ಯಕ್ಷಮಿತ್ರ ಕೂಟದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ‘ರಜತಪರ್ವ -2025 ‘ ಕಾಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ ಅಕಾಡೆಮಿ ಪ್ರಸ್ತುತ ಮಕ್ಕಳು ಮತ್ತು ಮಹಿಳಾ ಯಕ್ಷಗಾನ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಒಬ್ಬ ಮಹಿಳೆ […]