ಯಕ್ಷ ವೇಷಭೂಷಣ ಧರಿಸಿ ಭಿಕ್ಷಾಟನೆ, ಅಸಭ್ಯ ವರ್ತನೆ

ಉಡುಪಿ: ಯಕ್ಷಗಾನ ಕಲೆಗೆ ಸಂಬಂಧಿಸಿದ ಯಕ್ಷ ವೇಷಭೂಷಣಗಳನ್ನು ಧರಿಸಿ ಭಿಕ್ಷಾಟನೆ ಹಾಗೂ ಅಸಭ್ಯ ವರ್ತನೆ ತೋರುತ್ತಿದ್ದಾರೆ. ಯಕ್ಷಗಾನ ಕಲೆಗೆ ಅಪಮಾನ ಮಾಡುವವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ದ.ಕ ಜಿಲ್ಲಾ ಸಂಚಾಲಕ ಸರಪಾಡಿ ಅಶೋಕ್ ಶೆಟ್ಟಿ ಒತ್ತಾಯಿಸಿದರು. ಉಡುಪಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶೋತ್ಸವ ಸೇರಿದಂತೆ ವಿವಿಧ ಸಭೆ ಸಮಾರಂಭಗಳಲ್ಲಿ ಯಕ್ಷಗಾನ ವೇಷಗಳನ್ನು ಧರಿಸಿಕೊಂಡು ಕಲೆಗೆ ಅಪಮಾನ ಮಾಡುತ್ತಿದ್ದಾರೆ. ಇದು ವೃತ್ತಿಪರ ಕಲಾವಿದರಿಗೆ […]