ಸಿದ್ದರಾಮಯ್ಯನವರೇ ಇನ್ನು 9 ದಿನ ಉಳಿದಿದೆ, ನಿಮ್ಮ ಕುರ್ಚಿ ಅಲ್ಲಾಡುತ್ತಿದೆ; ಶಾಸಕ ಯಶ್ಪಾಲ್ ಸುವರ್ಣ ವ್ಯಂಗ್ಯ

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯೇ ಈಗ ಅಲ್ಲಾಡುತ್ತಿದೆ. ಇನ್ನು ನಿಮಗೆ ಒಂಭತ್ತು ದಿನಗಳ ಕಾಲಾವಕಾಶ ಇದೆ. ಅಷ್ಟರ ಒಳಗೆ ಜನರ ವಿಶ್ವಾಸ ಗಳಿಸಿ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವ್ಯಂಗ್ಯವಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಿಮ್ಮದೇ ಸರಕಾರದ ಶಾಸಕರು ಮತ್ತು ಸಚಿವರು ಸರಕಾರ ಶೇಕ್ ಆಗುತ್ತಿದೆ ಎಂದು ಒಪ್ಪಿಕೊಂಡಿದ್ದಾರೆ. ಆಗಸ್ಟ್ 29 ತಾರೀಕಿನ ತನಕ ನಿಮಗೆ ಸಮಯ ಇದೆ. ರಾಜಕೀಯ ನಿವೃತ್ತಿ ಅಂಚಿನಲ್ಲಾದರೂ ಉಳಿದ ಅನುದಾನಗಳನ್ನು ಬಿಡುಗಡೆ ಮಾಡಿ. ದೇವರು […]
ಉಡುಪಿ: ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಪ್ರತಿಭಟನೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣವನ್ನು ಖಂಡಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು. ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ನಿರಂತರ ಹಗರಣಗಳ ಸರದಾರ ಎಂಬ ಬಿರುದನ್ನು ಸಿದ್ದರಾಮಯ್ಯ […]