ಉಡುಪಿ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ; ಪವರ್ ಕಟ್ ಮಾಡಿದ ಮೆಸ್ಕಾಂ

ಉಡುಪಿ: ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಉಡುಪಿ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಉಡುಪಿ ಶಾಸಕರ ಮಧ್ಯಪ್ರವೇಶದ ಬಳಿಕ ತಾತ್ಕಾಲಿಕ ಪುನರ್ ಸಂಪರ್ಕ ನೀಡಿದ ಪ್ರಸಂಗ ನಡೆದಿದ್ದು, ರಾಜ್ಯ ಸರಕಾರ ದಿವಾಳಿಯಾಗಿದೆ ಎಂದು ಶಾಸಕ ಯತ್ಪಾಲ್ ಸುವರ್ಣ ಕಿಡಿಕಾರಿದ್ದಾರೆ. ಬನ್ನಂಜೆಯಲ್ಲಿರುವ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ ಇದ್ದು, ಬಿಲ್ ಪಾವತಿಸದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಮೆಸ್ಕಾಂ ತನ್ನ ನಿಯಮ ಪಾಲನೆ ಮಾಡಿತ್ತು. ಪ್ರವಾಸಿ ಮಂದಿರದಲ್ಲಿ ಇಬ್ಬರು […]