ಉಡುಪಿ:ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪಲು ಅರಿವು ಕಾರ್ಯಕ್ರಮಗಳು ಪ್ರಯೋಜನಕಾರಿ : ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ: ದೇಶದ ಬೆನ್ನುಲುಬಾದ ರೈತಾಪಿ ವರ್ಗದ ಅಭಿವೃದ್ದಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳುಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಎಲ್ಲ ಯೋಜನೆಗಳ ಮಾಹಿತಿಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅರಿವುಕಾರ್ಯಕ್ರಮಗಳು ಪ್ರಯೋಜನಕಾರಿಯಾಗಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಅಭಿಪ್ರಾಯಪಟ್ಟರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಇವರ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯ ಅರಿವು […]