ಉಡುಪಿ:ಮಹನೀಯರುಗಳ ತತ್ವ, ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತ : ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ: ಪ್ರತಿಯೊಂದು ಸಮುದಾಯವನ್ನು ಗೌರವಿಸಿ, ಆದರ್ಶ ವ್ಯಕ್ತಿಗಳ ತತ್ವಗಳನ್ನು ಮುಂದಿನ ಪೀಳಿಗೆಗೆಗೊತ್ತುಪಡಿಸುವ ನಿಟ್ಟಿನಲ್ಲಿ ಸರ್ಕಾರ ಜಯಂತಿಗಳನ್ನು ಆಚರಿಸುತ್ತಾ ಬಂದಿದೆ. ಮಹನೀಯರುಗಳ ತತ್ವ, ಸಂದೇಶಗಳುಸಾರ್ವಕಾಲಿಕವಾಗಿದ್ದು, ಅದರ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಇಂದು ನಗರದ ಅಂಬಲಪಾಡಿಯ ಜಿಲ್ಲಾ ಸವಿತಾ ಸಮಾಜ ಸಮುದಾಯದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸವಿತಾ ಸಮಾಜ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ […]