ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಕಾಟಾಚಾರದ ಪ್ರಾಕೃತಿಕ ವಿಕೋಪ ವೀಕ್ಷಣೆ; ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಉಡುಪಿ ಜಿಲ್ಲೆಯ ಜನತೆಯ ತೀವ್ರ ಆಕ್ರೋಶದ ಬಳಿಕ ಒಲ್ಲದ ಮನಸ್ಸಿನಿಂದ ಉಡುಪಿಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಧಿಕಾರಿಗಳೊಂದಿಗೆ ಕಾಟಾಚಾರಕ್ಕಾಗಿ ಪ್ರಾಕೃತಿಕ ವಿಕೋಪದ ಹಾನಿ ವೀಕ್ಷಣೆ ಮಾಡಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಸಮಧಾನ ವ್ಯಕ್ತಪಡಿಸಿದ್ದಾರೆ.ಉಡುಪಿ ಜಿಲ್ಲೆಯ ಎಲ್ಲಾ 5 ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದಾರೆ ಎಂಬ ಏಕೈಕ ಕಾರಣದಿಂದ ಸ್ಥಳೀಯ ಶಾಸಕರುಗಳಿಗೆ ಯಾವುದೇ ಮಾಹಿತಿ ನೀಡದೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆಯ ಪ್ರಹಸನ ಮಾಡುತ್ತಿದ್ದಾರೆ.ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು […]