ಗೋ ಕಳ್ಳತನ ಮುಂದುವರಿದರೆ ಬೆತ್ತಲೆ ಪ್ರಕರಣ ಮರುಕಳಿಸಬಹುದು: ಯಶಪಾಲ್ ಸುವರ್ಣ

ಉಡುಪಿ: ಕರಾವಳಿಯ ಗ್ರಾಮೀಣ ಪ್ರದೇಶಗಳಲ್ಲಿ ನಿರಂತರವಾಗಿ ಗೋಕಳ್ಳತನದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು ಇದಕ್ಕೆ ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣವಾಗಿದೆ. ಸರಕಾರದ ನಿರ್ಲಕ್ಷ್ಯ ಇದೇ ರೀತಿ ಮುಂದುವರೆದರೆ ಜಿಲ್ಲೆಯಲ್ಲಿ 2005ರ ತೀವ್ರತರವಾದ ಹೋರಾಟ,‌ ಅಲ್ಲದೇ ಬೆತ್ತಲೆ‌ ಪ್ರಕರಣ ಮತ್ತೊಮ್ಮೆ ಮರುಕಳಿಸಬಹುದು ಎಂದು ಬಿಜೆಪಿಯ ಜಿಲ್ಲಾ ಪ್ರ. ಕಾರ್ಯದರ್ಶಿ ಯಶಪಾಲ್ ಸುವರ್ಣ ಎಚ್ಚರಿಸಿದ್ದಾರೆ.ಮುಖ್ಯಮಂತ್ರಿ ಕುಮಾರಸ್ವಾಮಿಯವರು ಐಷಾರಾಮಿ ಹೊಟೇಲಲ್ಲಿ ಮಲಗಿ ಬೆಳಗ್ಗೆಗ್ರಾಮಗಳಿಗೆ ಹೋಗಿ ಮನವಿ ಸ್ವೀಕರಿಸಿ ಪ್ರಚಾರಗಿಟ್ಟಿಸಿಕೊಳ್ಳುವ ಬದಲು ನಿಜವಾದ ಜನಪರ ಕಾಳಜಿ ಇದ್ದರೆ ಕರಾವಳಿಗೆ […]