ಏಕಲವ್ಯ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2023 ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ:0820-2521324 ಅಥವಾ ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯಪ್ರಕಟಣೆ ತಿಳಿಸಿದೆ.