ಉಡುಪಿ:ಏಕತಾ ನಡಿಗೆ ಕಾರ್ಯಕ್ರಮ ಶಿಸ್ತುಬದ್ಧವಾಗಿ ಆಯೋಜಿಸಿ : ಸಂಸದ ಕೋಟ ಶ್ರೀನಿವಾಸ ಪ್ರಜಾರಿ ಕರೆ

ಉಡುಪಿ: ಸರ್ದಾರ್ ವಲ್ಲಬಾಯಿ ಪಟೇಲ್ ರ 150 ನೇ ಜನ್ಮ ದಿನದ ಅಂಗವಾಗಿ ನವೆಂಬರ್ 11 ರಂದು ಏಕತಾ ನಡಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮದ ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಶಿಸ್ತುಬದ್ಧವಾಗಿ ಕಾರ್ಯಕ್ರಮ ಆಯೋಜಿಸುವಂತೆ ಅಧಿಕಾರಿಗಳಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕತಾ ನಡಿಗೆ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಏಕತಾ ನಡಿಗೆ ಕಾರ್ಯಕ್ರಮವು ನವೆಂಬರ್ […]