ಉಡುಪಿ: ಬಾರ್ ನಲ್ಲಿ ಊಟ ಮುಗಿಸಿಕೊಂಡು ಹೊರಬರುತ್ತಿದ್ದ ಯುವಕನೊಬ್ಬ ದಿಢೀರ್ ಕುಸಿದುಬಿದ್ದು ಸಾವು

ಉಡುಪಿ: ಬಾರ್ ವೊಂದರಲ್ಲಿ ಊಟ ಮುಗಿಸಿಕೊಂಡು ಹೊರಬಂದ ಯುವಕನೊಬ್ಬ ದಿಢೀರ್ ಆಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಉದ್ಯಾವರ ಪಂದುಬೆಟ್ಟು ವಿಲೇಜ್ ಇನ್ ಬಾರ್‌ನಲ್ಲಿ ಮುಂಭಾಗ ಸಂಭವಿಸಿದೆ. ಉದ್ಯಾವರ ಸಂಪಿಗೆನಗರ ನಿವಾಸಿ ಸಚಿನ್ (23) ಮೃತಪಟ್ಟ ಯುವಕ. ಈತ ತನ್ನ ಸ್ನೇಹಿತರೊಂದಿಗೆ ಬಾರ್‌ನಲ್ಲಿ ಊಟ ಮಾಡಿ ಹೊರಬರುತ್ತಿದ್ದ. ಈ ವೇಳೆ ಸಚಿನ್ ಏಕಾಏಕಿಯಾಗಿ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಎತ್ತಿಕೊಂಡ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಸಚಿನ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. […]