ಉಡುಪಿ: ಯುವಕ ನೇಣಿಗೆ ಶರಣು

ಉಡುಪಿ: ಫ್ಯಾನಿಗೆ ನೇಣುಬಿಗಿದುಕೊಂಡು ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ವಾದಿರಾಜ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ವಾದಿರಾಜ ರಸ್ತೆಯ ನಿವಾಸಿ 24 ವರ್ಷದ ಮಹೇಶ್ ಭಟ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಜೀವನದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ನಗರ ಪೋಲಿಸ್ ಠಾಣೆಯ ತನಿಖಾ ಸಹಾಯಕ ವಿಶ್ವನಾಥ ಶೆಟ್ಟಿ ಅಮಾಸೆಬೈಲು, ಸಿಬ್ಬಂದಿ ಜೀವನ್ ಕೂಮಾರ್ ಘಟನಾ ಸ್ಥಳದಲ್ಲಿದ್ದು, ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು […]