ಉಡುಪಿ: ಇಂಧನ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ
ಉಡುಪಿ: ಇಂಧನ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಅಲೆವೂರಿನ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಉಡುಪಿ ನಗರಸಭೆ ಸದಸ್ಯ ರಮೇಶ್ ಕಾಂಚನ್, ಕೇಂದ್ರ ಸರ್ಕಾರ ಜನರಿಗೆ ನೀಡಿದ ಆಶ್ವಾಸನೆ ಈಡೇರಿಸುವಲ್ಲಿ ವಿಫಲವಾಗಿದೆ. ಸತತ ಡೀಸೆಲ್, ಪೆಟ್ರೋಲ್ ಹಾಗೂ ಗ್ಯಾಸ್ ಬೆಲೆ ಏರಿಸುವ ಮೂಲಕ ಸರ್ಕಾರ ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡುತ್ತಿದೆ ಎಂದು ದೂರಿದರು. ಬಿಜೆಪಿ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವೈಫಲ್ಯ ಕಂಡಿದ್ದು, […]