ಉಡುಪಿ: ಯುವ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆಗೈದ ಪ್ರಕರಣ: ಐವರು ಆರೋಪಿಗಳ ಬಂಧನ

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಎನ್ ಎಸ್ ಯು ಐ ಜಿಲ್ಲಾ ನಾಯಕ ಶರತ್ ಕುಂದರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಂಜಿಬೆಟ್ಟು ನಿವಾಸಿ ಅಕ್ಷತ್ ಪೈ (27), ಸುಶಾಂತ್ (25), ರಮಾನಂದ ಪೈ (42), ಸಂತೋಷ್ ಕೊರಗ (38), ಅಲೆವೂರು ನಿವಾಸಿ ಶಂಶಾಂಕ್ ನಾಯಕ್ (25) ಎಂದು ಗುರುತಿಸಲಾಗಿದೆ. ಜನವರಿ 30 ರಂದು ರಾತ್ರಿ 9 ಗಂಟೆ ಸುಮಾರಿಗೆ ಚಿಟ್ಟಾಡಿ ಬೈಲೂರು ಬಡಗುಬೆಟ್ಟು ನಿವಾಸಿ […]