ಉಡುಪಿ:ಯುವಜನರ ಕೌಶಲ್ಯ ಹೊರತರುವಲ್ಲಿ ಉದ್ಯೋಗ ಮೇಳಗಳು ಮಹತ್ತರ ಪಾತ್ರ ವಹಿಸುತ್ತವೆ : ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ: ಭಾರತ ದೇಶವು ಜಗತ್ತಿನಲ್ಲಿ ಅತಿ ಹೆಚ್ಚು ಯುವ ಸಂಪತ್ತನ್ನು ಹೊಂದಿರುವ ರಾಷ್ಟ್ರವಾಗಿದ್ದು, ಸೃಜನಾತ್ಮಕ ಕೌಶಲ್ಯಗಳನ್ನು ನಮ್ಮ ಯುವಪೀಳಿಗೆ ಹೊಂದಿದ್ದಾರೆ. ಅವರುಗಳ ಕೌಶಲ್ಯವನ್ನು ಹೊರತರುವಲ್ಲಿ ಉದ್ಯೋಗ ಮೇಳಗಳು ಮಹತ್ತರ ಪಾತ್ರ ವಹಿಸುತ್ತವೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ […]