ಉಡುಪಿ:ಯುವನಿಧಿ ವಿಶೇಷ ನೋಂದಣಿ ಅಭಿಯಾನ

ಉಡುಪಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರAಟಿ ಯೊಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ಅರ್ಹ ಅಭ್ಯರ್ಥಿಗಳು ಅಗಸ್ಟ್ 7 ರ ವರೆಗೆ ನಡೆಯಲಿರುವ ಯುವನಿಧಿ ವಿಶೇಷ ನೋಂದಣಿ ಅಭಿಯಾನದಲ್ಲಿ ಕರ್ನಾಟಕ ಒನ್, ಗ್ರಾಮ ಒನ್, ಸೇವಾ ಸಿಂಧೂ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಣಿ ಹಾಗೂ ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದ ಬಿ. ಬ್ಲಾಕ್ ರೂ. ನಂಬರ್ 201 ಮೊದಲನೆ ಮಹಡಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. […]