ಉಡುಪಿ:ಯುವನಿಧಿ ವಿಶೇಷ ನೋಂದಣಿ ಅಭಿಯಾನ ಆರಂಭ

udupixpress

ಉಡುಪಿ: ಉಡುಪಿ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ 2022-23 ಹಾಗೂ 2023-24 ನೇ ಸಾಲಿನಲ್ಲಿಉತ್ತೀರ್ಣರಾದ ಪದವಿ, ಸಾನತಕೋತ್ತರ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ ಜನವರಿ 20 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಅನಂತನಗರ ಮಣಿಪಾಲ ಸಂಸ್ಥೆಯ ಸಹಾಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ಲೇಸ್‌ಮೆಂಟ್ ವಿಭಾಗ, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂ.ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದಾಗಿದೆ ಎಂದು […]

ಉಡುಪಿ: ಯುವನಿಧಿ ಯೋಜನೆಗೆ ನೋಂದಣಿ ಪ್ರಾರಂಭ.

ಉಡುಪಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆಯ ಪ್ರಾರಂಭದ ಪೋಸ್ಟರ್ ಹಾಗೂ ಬ್ಯಾನರನ್ನು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಣಿಪಾಲದ ತಮ್ಮ ಕಚೇರಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕ ಚಂದ್ರಶೇಖರ್ ನಾಯ್ಕ್, ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು. ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ 3000 ರೂ. ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1500 ರೂ.ಗಳನ್ನು ಪ್ರತಿ ತಿಂಗಳು […]