ಮೈತ್ರಿ ಸರಕಾರ ಉರುಳಿಸಲು‌ ಬಿಜೆಪಿ ಷಡ್ಯಂತ್ರ: ವಿನಯ ಕುಮಾರ್ ಸೊರಕೆ

ಉಡುಪಿ: ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಶಾಸಕರ ರಾಜೀನಾಮೆ ಕೊಡಿಸಲು ಬಿಜೆಪಿ ಎಲ್ಲ ರೀತಿಯಿಂದಲೂ ಪ್ರಯತ್ನಿಸುತ್ತಿದೆ. ರಾಜ್ಯ ಮೈತ್ರಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ಮಾಡುತ್ತಿದ್ದು, ಇದರಲ್ಲಿ ಕರ್ನಾಟಕದ ರಾಜ್ಯಪಾಲರು ಸೇರಿ ಕೊಂಡಿದ್ದಾರೆ ಎಂದು ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಆರೋಪಿಸಿದರು. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರಿಗೆ ಹಣದ ಆಮಿಷವೊಡ್ಡಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಜ್ಜರಕಾಡಿನ ಸೈನಿಕರ ಹುತಾತ್ಮ ಸ್ಮಾರಕದ ಎದುರು ಬುಧವಾರ ಹಮ್ಮಿಕೊಂಡ ಬೃಹತ್‌ ಪ್ರತಿಭಟನೆಯಲ್ಲಿ  ಅವರು ಮಾತನಾಡಿದರು. […]

ಉಡುಪಿ: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ 

ಉಡುಪಿ: ಪಬ್ಲಿಕ್‌ ಸ್ಕೂಲ್‌ ಬದಲಾಗಿ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಬೇಕು ಹಾಗೂ ಸೇವಾ ಜೇಷ್ಠತೆ ಆಧಾರದಲ್ಲಿ ಕನಿಷ್ಠ ವೇತನ ಜಾರಿ ಮಾಡಬೇಕು ಹಾಗೂ‌ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ರಾಜ್ಯದಲ್ಲಿ 62,580 ಅಂಗನವಾಡಿ ಕೇಂದ್ರಗಳು […]

ದ.ಕ. ಜಿಲ್ಲೆಯಲ್ಲಿ ದಲಿತ ವಿದ್ಯಾರ್ಥಿಗಳ ಸರಣಿ  ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಉಡುಪಿ: ಇತ್ತೀಚೆಗೆ‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ದಲಿತ ವಿದ್ಯಾರ್ಥಿಗಳ ಸರಣಿ ಅತ್ಯಾಚಾರ ಖಂಡಿಸಿ ಹಾಗೂ ಅತ್ಯಾಚಾರ ಪ್ರಕರಣಗಳನ್ನು ಸಿಓಡಿ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಉಡುಪಿ ಅಂಬೇಡ್ಕರ್‌ ಯುವಸೇನೆ ವತಿಯಿಂದ ಅಜ್ಜರಕಾಡಿನ ಸೈನಿಕರ ಹುತಾತ್ಮ ಸ್ಮಾರಕದ ಎದುರು ಬುಧವಾರ ಪ್ರತಿಭಟನೆ ನಡೆಯಿತು. ದಲಿತ ಮುಖಂಡ ಜಯನ್‌ ಮಲ್ಪೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಬುದ್ಧಿವಂತರ ಜಿಲ್ಲೆಯೆಂದು ಕರೆಯಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದೆ. ಒಂದೇ ತಿಂಗಳಲ್ಲಿ ಮೂರು ದಲಿತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ […]

ಉಡುಪಿ: ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆ ಸಮಾರೋಪ

ಉಡುಪಿ: ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ಬ್ಯಾಂಕ್ ಆಫ್ ಬರೋಡ ಸಹ ಪ್ರಾಯೋಜಕತ್ವದಲ್ಲಿ 13 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗೆ ಮಣಿಪಾಲದ ಮರಿನಾ ಒಳಾಂಗಣ ಕ್ರೀಡಾಂಗಣ ಮತ್ತು ಅಜ್ಜರಕಾಡು ಒಳಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಭಾರತ ಸಬ್ ಜ್ಯೂನಿಯರ್ ರ‍್ಯಾಂಕಿಂಗ್  ರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್ ನ ಸಮಾರೋಪ‌ ಸಮಾರಂಭ ಭಾನುವಾರ ನಡೆಯಿತು. ವಿಜೇತರ ಪಟ್ಟಿ ಹೀಗಿದೆ: 13 ವರ್ಷ ಬಾಲಕರ ವಿಭಾಗ-ಅನ್ಶ್ ನೇಗಿ (ಉತ್ತರಾಖಂಡ್), ಬಾಲಕಿಯರ ವಿಭಾಗ- ಉನ್ನತಿ ಹೂಡಾ (ಹರ್ಯಾಣ), 13 ವರ್ಷ ಬಾಲಕರ ಡಬಲ್ಸ್-  ವನ್ಶ್ ಪ್ರತಾಪ್ […]

ಜಿಲ್ಲೆಯಲ್ಲಿ ಟ್ರಾನ್ಸ್ ಜೆಂಡರ್ಸ್‍ ನೊಂದಣಿ ಅಭಿಯಾನ: ಜಿಲ್ಲಾಧಿಕಾರಿ

ಉಡುಪಿ, ಜುಲೈ 6: ಉಡುಪಿ ಜಿಲ್ಲೆಯಲ್ಲಿರುವ ಟ್ರಾನ್ಸ್ ಜೆಂಡರ್ಸ್‍ಗಳಿಗೆ ಸರಕಾರದ ವಿವಿಧ ಸೌಲಭ್ಯ ನೀಡುವ ನಿಟ್ಟಿನಲ್ಲಿ ಅವರ ನಿಖರ ಸಂಖ್ಯೆ ಇಲ್ಲದ ಕಾರಣ, ಜಿಲ್ಲೆಯಲ್ಲಿನ ಟ್ರಾನ್ಸ್ ಜೆಂಡರ್ಸ್‍ಗಳನ್ನು ನೊಂದಣಿ ಮಾಡಿ, ಅವರಿಗೆ ಗುರುತಿನ ಚೀಟಿ ವಿತರಿಸಲು ವಿಶೇಷ ನೊಂದಣಿ ಅಭಿಯಾನ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಶನಿವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲಾ ಮಟ್ಟದ ಟ್ರಾನ್ಸ್ ಜೆಂಡರ್ಸ್ ಸಮನ್ವಯ ಸಮಿತಿ/ಕೋಶ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಇದುವರೆಗೆ 282 ಮಂದಿ […]