ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ದೇವೇಗೌಡ ದಂಪತಿ
ಉಡುಪಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಂಗಳವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು. ಪತ್ನಿ ಚೆನ್ನಮ್ಮ ಅವರೊಂದಿಗೆ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದ ದೇವೇಗೌಡರು, ಮಠದ ಸುವರ್ಣ ಗೋಪುರ ಯೋಜನೆ ಬಗ್ಗೆ ತಿಳಿದುಕೊಂಡರು. ಬಳಿಕ ಪರ್ಯಾಯ ಪಲಿಮಾರು ಶ್ರೀವಿದ್ಯಾ ಧೀಶ ತೀರ್ಥ ಸ್ವಾಮೀಜಿ ಅವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದು ಶ್ರೀಕೃಷ್ಣ ಪ್ರಸಾದ ಸ್ವೀಕರಿಸಿದರು. ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಮುಖಂಡರಾದ ಶಾಲಿನಿ […]
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ: ಅರ್ಜಿ ಆಹ್ವಾನ
ಉಡುಪಿ, ಮೇ 9: 2019-20 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಈ ಕೆಳಗೆ ನಮೂದಿಸಿರುವ ಕಾರ್ಯಕ್ರಮಗಳಡಿ ಸಹಾಯಧನ ಪಡೆಯಲು ಅರ್ಹ/ಆಸಕ್ತಿ ರೈತರು/ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಬಾಳೆ ಪ್ರದೇಶ ವಿಸ್ತರಣೆ (ಕಂದುಗಳು ಮತ್ತು ಅಂಗಾಂಶ ಕೃಷಿ), ಅನಾನಸ್ಸು ಪ್ರದೇಶ ವಿಸ್ತರಣೆ, ಹೈಬ್ರಿಡ್ ತರಕಾರಿಗಳ ಪ್ರದೇಶ ವಿಸ್ತರಣೆ, ಕಾಳುಮೆಣಸು ಪ್ರದೇಶ ವಿಸ್ತರಣೆ, ಕೋಕೊ ಪ್ರದೇಶ ವಿಸ್ತರಣೆ, ಅಣಬೆ ಉತ್ಪಾದನಾ ಘಟಕ, ಗೇರು ಪುನಃಶ್ಚೇತನ, ಕಾಳುಮೆಣಸು ಪುನಃಶ್ಚೇತನ, ಕೃಷಿ ಹೊಂಡ(20*20*3 ಘ.ಮೀ.), ಹಸಿರು ಮನೆ (ಬೆಳೆಯೊಂದಿಗೆ), ನೆರಳು ಪರದೆ […]
ಶಂಕರಾಚಾರ್ಯರಿಂದ ಹಿಂದೂ ಧರ್ಮ ರಕ್ಷಣೆ: ಸಿಂಧೂ ಬಿ ರೂಪೇಶ್
ಉಡುಪಿ, ಮೇ 9: 8 ನೇ ಶತಮಾನದಲ್ಲಿ ಹಲವು ಧರ್ಮಗಳ ಸವಾಲಿನ ನಡುವೆ ಹಿಂದೂ ಧರ್ಮವನ್ನು ರಕ್ಷಿಸುವಲ್ಲಿ ಶಂಕರಾಚಾರ್ಯರು ಮಹತ್ವದ ಕಾರ್ಯಗಳ ಮೂಲಕ ಹಿಂದೂ ಧರ್ಮ ರಕ್ಷಿಸಿದ್ದರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ ರೂಪೇಶ್ ಹೇಳಿದರು. ಅವರು ಗುರುವಾರ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನಡೆದ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅದ್ವೈತ ಧರ್ಮ ಪ್ರತಿಪಾದಿಸಿದ ಶಂಕರಚಾರ್ಯರು […]
ಉಡುಪಿ ನಗರ: ಕುಡಿಯುವ ನೀರು ಸರಬರಾಜಿಗೆ ಅಗತ್ಯ ಕ್ರಮ
ಉಡುಪಿ, ಮೇ 9: ಉಡುಪಿ ನಗರಸಭೆಗೆ ಕುಡಿಯುವ ನೀರು ಪೂರೈಸುವ ಬಜೆ ಅಣೆಕಟ್ಟಿನಲ್ಲಿ ನೀರು ಸಂಪೂರ್ಣ ಖಾಲಿಯಗಿರುವುದರಿಂದ ಬಜೆ ಅಣೆಕಟ್ಟು ಮತ್ತು ಶೀರೂರು ಅಣೆಕಟ್ಟಿನ ನಡುವೆ ಇರುವ ದೊಡ್ಡ ಹೊಂಡಗಳಲ್ಲಿ ಶೇಖರಣೆಗೊಂಡಿರುವ ನೀರನ್ನು ಡ್ರೆಡ್ಜಿಂಗ್ ಮುಖಾಂತರ ಜಾಕ್‍ವೆಲ್‍ಗೆ ಹಾಯಿಸಿಕೊಂಡು ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಈ ಹಿಂದೆ ಮೂರು ದಿವಸಗಳಿಗೊಮ್ಮೆ ನೀರು ಸರಬರಾಜು ಮಾಡುವಷ್ಟು ಪ್ರಮಾಣದಲ್ಲಿ ನೀರು ದೊರಕುತ್ತಿಲ್ಲವಾದ್ದರಿಂದ, ನಗರವನ್ನು ಆರು ವಿಭಾಗಗಳಾಗಿ ವಿಂಗಡಿಸಿ ಒಂದು ದಿವಸಕ್ಕೆ ಒಂದು ವಿಭಾಗಕ್ಕೆ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಉಡುಪಿ ನಗರಸಭೆಯ […]
ಆಚಾರ್ಯಾಸ್ ಏಸ್: ಸುಮಂತ್ ಕಾರಂತ್, ಆದಿತ್ಯ ಎ. ರಾವ್ ಅವರಿಗೆ ರ್ಯಾಂಕ್
ಉಡುಪಿ, ಮೇ 7: 9ನೇ ತರಗತಿ, ಎಸೆಸೆಲ್ಸಿ, ಪಿಯುಸಿ, ಸಿಇಟಿ, ನೀಟ್, ಜೆಇಇ ಮೇನ್ಸ್, ಕಾಮರ್ಸ್ ಹಾಗೂ ಬ್ಯಾಕಿಂಗ್ ಪ್ರವೇಶ ಪರೀಕ್ಷೆಗಳ ಉತ್ಕೃಷ್ಟ ಫಲಿತಾಂಶಕ್ಕಾಗಿ ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ಆಚಾರ್ಯಾಸ್ ಏಸ್ ಸಂಸ್ಥೆಯಲ್ಲಿ ತರಬೇತಿ ಪಡೆದ ಸುಮಂತ್ ಕಾರಂತ್ ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆದಿತ್ಯ ಎ. ರಾವ್ ರಾಜ್ಯಕ್ಕೆ 10ನೇ ರ್ಯಾಂಕ್ ಪಡೆದಿದ್ದಾರೆ. 10 ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಸುಮಂತ್ ಕಾರಂತ್ ಮತ್ತು ಆದಿತ್ಯ ಎ. […]