ಶ್ರೀಲಂಕಾ ಸ್ಫೋಟದಲ್ಲಿ ಮೃತಪಟ್ಟವರಿಗೆ  ಶ್ರದ್ಧಾಂಜಲಿ ಶಾಂತಿ, ಪ್ರೀತಿ ಅಹಿಂಸೆಯಿಂದ ಜಗತ್ತು ಗೆಲ್ಲಲು ಸಾಧ್ಯ: ಜೆರಾಲ್ಡ್ ಐಸಾಕ್ 

ಉಡುಪಿ: ಶ್ರೀಲಂಕಾದಲ್ಲಿ ಉಗ್ರರ ಸ್ಫೋಟಕ್ಕೆ ಮೃತರಾದವರಿಗೆ ಗುರುವಾರ ನಗರದ ಶೋಕಮಾತ ಇಗರ್ಜಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಅವರು ಮಾತನಾಡಿ ಭಯೋತ್ಪಾದನೆ, ಹಿಂಸೆ, ದ್ವೇಷ ಹಾಗೂ ಕ್ರೂರ ಕೃತ್ಯಗಳಿಂದ ಜಗತ್ತನ್ನು ನಾಶ ಮಾಡಲು ಸಾಧ್ಯವಿಲ್ಲ. ಬದಲಾಗಿ ಶಾಂತಿ, ಪ್ರೀತಿ, ಅಹಿಂಸೆ ಹಾಗೂ ಕ್ಷಮೆಯ ಮೂಲಕ ಜಗತ್ತನ್ನು, ಮಾನವ ಕುಲವನ್ನು ಜಯಿಸಲು ಸಾಧ್ಯ’ ಎಂದರು. ತಮ್ಮದಲ್ಲದ ತಪ್ಪಿಗೆ ನೂರಾರು ಮಂದಿ ಬಲಿಯಾಗಿದ್ದಾರೆ. ಈ ಕ್ರೂರ ಕೃತ್ಯವನ್ನು ಇಡೀ ಜಗತ್ತು ಖಂಡಿಸುತ್ತದೆ. […]

ಲೋಕಸಭಾ ಚುನಾವಣೆ ವೆಬ್ ಕಾಸ್ಟಿಂಗ್ ಉಡುಪಿ 100% ಸಾಧನೆ

ರಾಜ್ಯದಲ್ಲಿ ಏಪ್ರಿಲ್ 18 ರಂದು ನಡೆದ ಪ್ರಥಮ ಹಂತದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 14 ಜಿಲ್ಲೆಗಳ ವ್ಯಾಪ್ತಿಯ ವಿವಿಧ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಅಳವಡಿಸಿದ್ದು,  ಇದರಲ್ಲಿ ಉಡುಪಿ ಜಿಲ್ಲೆಯ ಒಟ್ಟು 54 ಮತಗಟ್ಟೆಗಳಲ್ಲಿ ವೆಬ್ ಕ್ಯಾಮೆರಾ ಅಳವಡಿಸಲಾಗಿತ್ತು,  ಇತರೆ ಜಿಲ್ಲೆಗಳಲ್ಲಿ ಅಳವಡಿಸಿದ್ದ ಎಲ್ಲಾ ವೆಬ್ ಕ್ಯಾಮೆರಗಳು  ವಿವಿಧ ಕಾರಣಗಳಿಂದ ಸಮಪ್ಕ ಕಾರ್ಯ ನಿರ್ವಹಿಸಿಲ್ಲ , ಆದರೆ ಉಡುಪಿಯಲ್ಲಿ ಅಳವಡಿಸಿದ್ದ  ಎಲ್ಲಾ ಕ್ಯಾಮೆರಾಗಳು ಯಾವುದೇ ಅಡೆತಡೆಗಳಿಲ್ಲದೇ ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ಮೂಲಕ 14 ಜಿಲ್ಲೆಗಳಲ್ಲಿ ಉಡುಪಿ ಜಿಲ್ಲೆ 100% […]

ಮದುವೆ ಮನೆಗಳಂತೆ ಶೃಂಗಾರಗೊಂಡಿವೆ ಸಖಿ ಮತಗಟ್ಟೆಗಳು..

ಉಡುಪಿ: ಏಪ್ರಿಲ್ 18 ರಂದು ನಡೆಯುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆ ಪ್ರಯುಕ್ತ , ಮಹಿಳಾ ಮತದಾರರನ್ನು ಆಕರ್ಷಿಸಲು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭಿಸಿರುವ, ಮಹಿಳಾ ಸಿಬ್ಬಂದಿಗಳೇ ನಿರ್ವಹಿಸುವ  25  ಸಖಿ ಮತಗಟ್ಟೆಗಳು ಮದುವೆ ಮನೆಗಳಂತೆ ಕಂಗೊಳಿಸುತ್ತಿವೆ. ಮತಗಟ್ಟೆಗಳನ್ನು ಆಕರ್ಷಕ ಬಟ್ಟಯ ಬಣ್ಣಗಳಿಂದ ಶೃಂಗಾರಗೊಳಿಸಿದ್ದು, ಮತಗಟ್ಟೆಯಲ್ಲಿ ಮ್ಯಾಟ್ ಅಳವಡಿಕೆ ಜೊತೆಗೆ  ಟೇಬಲ್ ಮತ್ತು ಕುರ್ಚಿಗಳನ್ನು  ಸಹ ಅಲಂಕರಿಸಲಾಗಿದೆ. ಮತಗಟ್ಟೆಯ ಗೋಡೆಯ ಮೇಲೆ ಮಕ್ಕಳು ಬಿಡಿಸಿರುವ ಚಿತ್ರಗಳನ್ನು ಅಳವಡಿಸಲಾಗಿದೆ. ಮತಗಟ್ಟಯ ಹೊರಗೆ ಶಾಮಿಯಾನ ಮೂಲಕ ನೆರಳಿನ ವ್ಯವಸ್ಥೆ ಮಾಡಿದ್ದು, ತುರ್ತು […]

ಜಿಲ್ಲಾಧಿಕಾರಿಯವರಿಂದ ಮತದಾನ ಆಮಂತ್ರಣ.. ಉಡುಪಿ ಜಿಲ್ಲೆಯ ಆತ್ಮೀಯ ಮತದಾರ ಬಂಧುಗಳೇ..

ನಮ್ಮದು ಜಗತ್ತಿನಲ್ಲಿ ಅತ್ಯಂತ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಹಲವಾರು ಭಾಷೆ, ಜನಾಂಗ, ಸಂಸ್ಕøತಿ, ಧರ್ಮ ಹೊಂದಿರುವ ನಾವೆಲ್ಲರೂ ಒಂದು ಎಂಬ ಭಾವನೆಯಿಂದ ಬದುಕುತ್ತಿದ್ದೇವೆ. ಆದ್ದರಿಂದ ವಿಶ್ವದಲ್ಲಿ ನಮ್ಮದು ಬೃಹತ್  ಪ್ರಜಾ ಸತ್ತಾತ್ಮಕ ಜಾತ್ಯಾತೀತ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರವಾಗಿ  ಹೊರಹೊಮ್ಮಿದೆ. ಮತದಾರ ಬಂದುಗಳೇ, ನಮ್ಮ ದೇಶಕ್ಕೆ ಸುಭದ್ರ ಸರ್ಕಾರವನ್ನು ಆಯ್ಕೆ ಮಾಡಲು ಇದೇ  ಏಪ್ರಿಲ್ 18 ರ ಗುರುವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಅಂದು […]

ಮತಗಟ್ಟೆ ಸಮೀಪ ಪಕ್ಷಗಳ ಬೂತ್ ಅನುಮತಿ ಅಗತ್ಯ: ಜಿಲ್ಲಾಧಿಕಾರಿ

ಉಡುಪಿ: ಏಪ್ರಿಲ್ 18 ರಂದು  ನಡೆಯುವ  ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನದ ದಿನದಂದು, ರಾಜಕೀಯ ಪಕ್ಷ ಮತ್ತು ಅಭ್ಯರ್ಥಿಗಳ ಪರವಾಗಿ ಮತಗಟ್ಟೆಯ 200 ಮೀಟರ್ ದೂರದಲ್ಲಿ ಸರಳವಾಗಿ ಬೂತ್ ರಚಿಸಬೇಕು, ಬೂತ್ ರಚಿಸಲು ಸ್ಥಳೀಯ ಗ್ರಾಮ ಪಂಚಾಯತ್ ಅಥವಾ  ಪುರಸಭೆ, ನಗರಸಭೆಯ, ಪಟ್ಟಣ ಪಂಚಾಯತ್‍ನಿಂದ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ  ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಲೋಕಸಭಾ ಚುನವಣೆಯಲ್ಲಿ ಸ್ಪರ್ಧಿಸಿರುವ ರಾಜಕೀಯ ಪಕ್ಷಗಳ ಮತ್ತು […]