ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಉಡುಪಿ ಪ್ರಥಮ, ದ.ಕ. ದ್ವಿತೀಯ
ಬೆಂಗಳೂರು, ಏ.15: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದಿದೆ. ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ. ಇಲಾಖೆಯ ನಿರ್ದೇಶಕಿ ಸಿ.ಶಿಖಾ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಮಾ.1ರಿಂದ 18ರ ವರೆಗೆ ಪರೀಕ್ಷೆ ನಡೆದಿತ್ತು. ಫಲಿತಾಂಶವನ್ನು ಮಧ್ಯಾಹ್ನ 12 ಗಂಟೆಗೆ ವೆಬ್‌ಸೈಟ್‌ನಲ್ಲಿ ಮತ್ತು ಏ.16ರಂದು ಕಾಲೇಜುಗಳಲ್ಲಿ ಪ್ರಕಟಪಡಿಸಲಾಗುತ್ತದೆ. ಶೇ. 68.24 ಬಾಲಕಿಯರು ಹಾಗೂ ಶೇ. 55.29 ಬಾಲಕರು ತೇರ್ಗಡೆ ಹೊಂದಿದ್ದಾರೆ. ಒಟ್ಟು […]
ಮತದಾನ ದಿನ ಎಚ್ಚರಿಕೆ ವಹಿಸಿ: ಚುನಾವಣಾ ವೀಕ್ಷಕರು
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 18 ರಂದು ನಡೆಯುವ ಮತದಾನದ ದಿನ , ಸೂಕ್ಷ್ಮ ಮತ್ತು ಸಮಸ್ಯಾತ್ಮಕ ಮತಗಟ್ಟೆಗಳಿರುವ ಕಡೆಗಳಲ್ಲಿ ಎಲ್ಲಾ ಸೆಕ್ಟರ್ ಅಧಿಕಾರಿಗಳು ಮತ್ತು ನೋಡೆಲ್ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ವೀಕ್ಷಕ ಕೃಷ್ಣ ಕುನಾಲ್ ತಿಳಿಸಿದ್ದಾರೆ. ಅವರು ಭಾನುವಾರ, ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸೆಕ್ಟರ್ ಅಧಿಕಾರಿಗಳು ಹಾಗೂ ವಿವಿಧ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮತದಾನದ ದಿನ ಸೂಕ್ಷ್ಮ ಮತ್ತು ಸಮಸ್ಯಾತ್ಮಕ ಮತಗಟ್ಟೆಗಳಿರುವ […]
ಮತದಾನ ಜಾಗೃತಿ ವಸ್ತು ಪ್ರದರ್ಶನ ಉದ್ಘಾಟನೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವತಿಯಿಂದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಭಾಂಗಣದ ಬಳಿ ಮತದಾನದ ಮಹತ್ವ ಕುರಿತಂತೆ ಆಯೋಜಿಸಿರುವ 3 ದಿನಗಳ ವಸ್ತುಪ್ರದರ್ಶನವನ್ನು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಂಗಳವಾರ ಉದ್ಘಾಟಿಸಿದರು. ಮತದಾನದ ಮಹತ್ವ ಕುರಿತಂತೆ ಜಾಗೃತಿ ಮೂಡಿಸುವ ಆಕರ್ಷಕ ವಸ್ತುಪ್ರದರ್ಶನ ಕಾರ್ಯಕ್ರಮ ಇದಾಗಿದ್ದು, ಸೀ ವಿಜಿಲ್, ಹಿರಿಯ ನಾಗರೀಕರಿಗೆ ಮತದಾನ ಸಂದರ್ಭ ದೊರೆಯುವ ಸೌಲಭ್ಯಗಳು, ಮತದಾರರ ಸಹಾಯವಾಣಿ , ಆಮಿಷಗಳಿಗೆ ಬಲಿಯಾಗದಂತೆ, ಮುಂತಾದ ವಿಷಯಗಳ ಬಗ್ಗೆ ವಸ್ತುಪ್ರದರ್ಶನ ಕಾರ್ಯಕ್ರಮ ಮಾಹಿತಿ ನೀಡಲಿದೆ. ಚುನಾವಣಾ ವೆಚ್ಚ […]
ಲೋಕಸಭಾ ಚುನಾವಣೆ: ಏ. 18 ಮತ್ತು 23 ರಂದು ಸಾರ್ವತ್ರಿಕ ರಜೆ
ಉಡುಪಿ: ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2019 ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 18 ರಂದು ಮತ್ತು ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಏಪ್ರಿಲ್ 23 ರಂದು ಚುನಾವಣೆ ನಡೆಯಲಿರುತ್ತದೆ. ಚುನಾವಣಾ ಕ್ಷೇತ್ರ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಚುನಾವಣೆ ನಡೆಯುವ […]
ಸೀ ವಿಜಿಲ್ ದೂರು ವಿಲೇವಾರಿ: ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ
ಉಡುಪಿ ಜಿಲ್ಲೆ ಈಗಾಗಲೇ ಹಲವು ಕ್ಷೇತ್ರದಲ್ಲಿ ಇಡೀ ರಾಜ್ಯಕ್ಕೆ ಮಾದರಿಯಾಗಿದ್ದು, ಪ್ರಸ್ತುತ ಮುಕ್ತ, ಪಾರದರ್ಶಕ, ನ್ಯಾಯ ಸಮ್ಮತ ಚುನಾವಣೆ ನಡೆಸುವಲ್ಲಿ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಚುನಾವಣಾ ಅಕ್ರಮ ತಡೆಗಾಗಿ ಚುನಾವಣಾ ಆಯೋಗ ರೂಪಿಸಿರುವ ಸೀವಿಜಿಲ್ ಆಪ್ ನಲ್ಲಿ ಸಾರ್ವಜನಿಕರು ತಮಗೆ ಕಂಡ ಚುನಾವಣಾ ಆಕ್ರಮಗಳನ್ನು ನೇರವಾಗಿ ಆಪ್ ಮೂಲಕ ನೀಡಬಹುದಾಗಿದ್ದು, ಸೀ ವಿಜಿಲ್ ನಲ್ಲಿ ದಾಖಲಾದ ದೂರುಗಳನ್ನು ವಿಲೇವಾರಿ ಮಾಡುವಲ್ಲಿ ಉಡುಪಿ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ. ಚುನಾವಣ ಆಯೋಗ ಬಿಡುಗಡೆ ಮಾಡಿರುವ ಸೀವಿಜಿಲ್ ಕುರಿತ […]