ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ: ಕಡ್ಡಾಯ ಹಾಜರಾತಿಗೆ ಸೂಚನೆ
ಉಡುಪಿ: ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ 2019 ರ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದೇಶ ಪಡೆದ ಎಲ್ಲಾ ಮತಗಟ್ಟೆ ಅಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಮಾರ್ಚ್ 31 ರಂದು 118- ಬೈಂದೂರು ವಿಧಾನಸಭಾ ಕ್ಷೇತ್ರದ ಶೀರೂರು ಗ್ರೀನ್ ವ್ಯಾಲಿ ಇಂಟರ್ ನ್ಯಾಷನಲ್ ಸ್ಕೂಲ್, 119- ಕುಂದಾಪುರ ವಿಧಾನಸಭಾ ಕ್ಷೇತ್ರದ ಕುಂದಾಪುರ ಜೂನಿಯರ್ ಕಾಲೇಜು, 120- ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಗಿರಿ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆ, 121- ಕಾಪು ವಿಧಾನಸಭಾ ಕ್ಷೇತ್ರದ ಕಾಪು ಉಳಿಯಾರಗೋಳಿ ದಂಡತೀರ್ಥ […]
ಉತ್ತರಾಧಿಕಾರಿಯಾಗಿ ಶ್ರೇಷ್ಠ ವಟು ದೊರಕಿದ್ದಾನೆ: ಪಲಿಮಾರು ಶ್ರೀ
ಉಡುಪಿ: ನಮಗೆ ಗುರುಗಳು ನೀಡಿದ ಭಾಗ್ಯ ಎರಡು ಒಂದು ಸನ್ಯಾಸ ಮತ್ತೊಂದು ಶ್ರೀ ಕೃಷ್ಣ ದೇವರು, ಶ್ರೀ ರಾಮ ದೇವರ ಪೂಜೆಯೊಂದಿಗೆ ಪಾಠಪ್ರವಚನ. ಇದು ನಿರಂತರವಾಗಿ ಬೆಳೆಯ ಬೇಕು ಮತ್ತು ಬೆಳಸಬೇಕು ಎಂದು ಉಡುಪಿಯ ಪಲಿಮಾರು ಶ್ರೀಗಳು ಹೇಳಿದ್ದಾರೆ. ಅವರು ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಸನ್ಯಾಸ ಎಂದರೆ ಕೇವಲ ಕಾಷಾಯ ವಸ್ತ್ರ ಬದಲಾವಣೆಯಲ್ಲ ಮಾನಸಿಕವಾದ ಪಕ್ವಾತೆಯೊಂದಿಗೆ ಪೂರ್ಣ ವಿರಕ್ತಿ ಭಾವ. ಅದು ಇದ್ದಲ್ಲಿ ಮಾತ್ರ ಸನ್ಯಾಸಕ್ಕೆ ಅರ್ಥವಿದೆ. ಇಂತಹ ಸನ್ಯಾಸದಿಂದಲೇ ಭಗವಂತನನ್ನು ಒಲಿಸಿಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ […]
ಉಡುಪಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಕೊನೆ ಕ್ಷಣದಲ್ಲಿ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ನಾಮಪತ್ರ
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪ್ರಮೋದ್ ಮಧ್ವರಾಜ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಯುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯ ಅಮೃತ್ ಶೆಣೈ ಇಂದು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಬಂಡಾಯ ಸಾರಿದ್ದಾರೆ. ಅಂತಿಮ ಕ್ಷಣದಲ್ಲಿ ಸ್ಪರ್ಧೆಯ ಕುರಿತು ನಿರ್ಧಾರ ತೆಗೆದುಕೊಂಡ ಅಮೃತ್ ಶೆಣೈ ಮಧ್ಯಾಹ್ನ 2.45ರ ಸುಮಾರಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರವನ್ನು ಸಲ್ಲಿಸಿದರು. ಅವರೊಂದಿಗೆ ಯಜ್ಞೇಶ್ ಆಚಾರ್ಯ, ಮನೋವೈದ್ಯ ಡಾ.ಪಿ.ವಿ. ಭಂಡಾರಿ, ಅಲೆನ್ ರೋಹನ್ ವಾಜ್, ಅನಿತಾ […]
ಲೋಕಸಭಾ ಚುನಾವಣೆ: ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ
ಉಡುಪಿ: ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ 2019 ರ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದೇಶ ಪಡೆದ ಎಲ್ಲಾ ಮತಗಟ್ಟೆ ಅಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಮಾರ್ಚ್ 31 ರಂದು 118- ಬೈಂದೂರು ವಿಧಾನಸಭಾ ಕ್ಷೇತ್ರದ ಶೀರೂರು ಗ್ರೀನ್ ವ್ಯಾಲಿ ಇಂಟರ್ ನ್ಯಾಷನಲ್ ಸ್ಕೂಲ್, 119- ಕುಂದಾಪುರ ವಿಧಾನಸಭಾ ಕ್ಷೇತ್ರದ ಕುಂದಾಪುರ ಜೂನಿಯರ್ ಕಾಲೇಜು, 120- ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಗಿರಿ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆ, 121- ಕಾಪು ವಿಧಾನಸಭಾ ಕ್ಷೇತ್ರದ ಕಾಪು ಉಳಿಯಾರಗೋಳಿ ದಂಡತೀರ್ಥ […]
ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶ್ರೀಕೃಷ್ಣಮಠಕ್ಕೆ ಭೇಟಿ
ಉಡುಪಿ: ಶ್ರೀಕೃಷ್ಣ ಮಠಕ್ಕೆ ಕೇಂದ್ರ ಸರ್ಕಾರದ ರಕ್ಷಣಾ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಇವರು ಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಬಿ.ಜೆ.ಪಿ ಮುಖಂಡರಾದ ಉದಯಕುಮಾರ್ ಶೆಟ್ಟಿ, ಶ್ರೀಶ ನಾಯಕ್, ಪ್ರದೀಪ್ ರಾವ್, ವಿಜಯ್ ಭಟ್, ಭಾರತಿಶೆಟ್ಟಿ, ಸುವರ್ಧನ್ ನಾಯಕ್, ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ […]