ಕಾಂಗ್ರೆಸ್-ಜೆಡಿಎಸ್ ಚಿಹ್ನೆಯ ಶಾಲು ಧರಿಸಿ ಗಮನ ಸೆಳೆದ ಪ್ರಮೋದ್ ಮಧ್ವರಾಜ್

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್-ಜೆಡಿಎಸ್ಚಿ ಹ್ನೆಯುಳ್ಳ ಶಾಲು ಧರಿಸಿ ಗಮನ ಸೆಳೆದರು. ಶುಕ್ರವಾರ ಜೆಡಿಎಸ್ ಬಿ ಫಾರಂ ಪಡೆದುಕೊಂಡು ತವರಿಗೆ ಆಗಮಿಸಿದ ಅವರು ಮೊದಲು ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು. ಒಂದೇ ಶಾಲಿನಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಎರಡು ಪಕ್ಷದ ಚಿಹ್ನೆ ಮುದ್ರಿಸಿಕೊಂಡಿರುವರುವ ಪ್ರಮೋದ್,  ಇಂತಹ ಶಾಲು ಈವರೆಗೆ ಯಾರೂ ತಯಾರು ಮಾಡಿಲ್ಲ. ಈ ಶಾಲನ್ನು 18 ರ ವರೆಗೆ ತೊಟ್ಟಿರುತ್ತೇನೆ. ಚಿಹ್ನೆಯ ಬಗ್ಗೆ ಜನರಿಗೆ ಉತ್ತರ […]

ಜಿಲ್ಲೆಯಲ್ಲಿ ಜಲ ಸಂರಕ್ಷಣೆ ನಿರಂತರವಾಗಿರಲಿ: ಸಿಂಧೂ ರೂಪೇಶ್

ಉಡುಪಿ: ಜಲ ಸಂರಕ್ಷಣೆಯ ಕಾರ್ಯ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಿರದೆ, ವರ್ಷ ಪೂರ್ತಿ ಪ್ರತೀ ದಿನ ನಿರಂತರವಾಗಿ ನಡೆಯಬೇಕು ಹಾಗೂ ಪ್ರತಿ ಮನೆ ಮನೆಗಳಲ್ಲೂ ನೀರನ್ನು ವ್ಯರ್ಥವಾಗಿ ಪೋಲು ಮಾಡದೇ ನಿಯಮಿತವಾಗಿ ಬಳಸುವುದರ ಮೂಲ ನೀರಿನ ಸಂರಕ್ಷಣೆ ನಡೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ ರೂಪೇಶ್ ಹೇಳಿದ್ದಾರೆ. ಅವರು ಶುಕ್ರವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಸುಮಾರು 15 […]

ಎಸ್‍ಎಸ್‍ಎಲ್‍ಸಿ ಪರೀಕ್ಷೆ: ನಿಗಮದ ಬಸ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಉಡುಪಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಮಾರ್ಚ್ 21 ರಿಂದ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಕ.ರಾ.ರ.ಸಾ. ನಿಗಮವು, ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುವ ದಿನಗಳಲ್ಲಿ ಅಂದರೆ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆಗೆ ಹಾಜರಾಗುವ, ನಿಗಮದ ವತಿಯಿಂದ ವಿತರಿಸಿರುವ ವಿದ್ಯಾರ್ಥಿ ರಿಯಾಯಿತಿ ಬಸ್‍ಪಾಸ್ ಹೊಂದಿರುವ  ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸಸ್ಥಳಕ್ಕೆ ಹಿಂದಿರುಗುವಾಗ ಬಸ್ ಪಾಸ್ ಹಾಗು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ […]

ಪ.ಜಾತಿ/ ಪ.ಪಂ.ದ ನಿರುದ್ಯೋಗ ಯುವಕ/ ಯುವತಿಯರಿಗೆ ವಿವಿಧ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿ

ಉಡುಪಿ: ಕರ್ನಾಟಕದ ಏಕೈಕ ಕೇಂದ್ರೀಯ ಪ್ಲಾಸ್ಟಿಕ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ, ಮೈಸೂರು ಕಾಲೇಜಿನಲ್ಲಿ 2018-19 ನೇ ಸಾಲಿನ ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳಿಗೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ಊಟ, ವಸತಿ ಹಾಗೂ ಮಾಸಿಕ 500 ರೂ. ಶಿಷ್ಯ ವೇತನ, ತರಬೇತಿ ನಂತರ ಉದ್ಯೋಗಾವಕಾಶ ಕಲ್ಪಿಸಿ ಕೊಡಲಾಗುವುದು. ತರಬೇತಿ ಅವಧಿಯು 6 ತಿಂಗಳಾಗಿದ್ದು, ಸದರಿ ತರಬೇತಿಗೆ ಕನಿಷ್ಟ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. […]

ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ಕರ್ತವ್ಯ: ಜಿಲ್ಲಾ ನ್ಯಾಯಾಧೀಶರು

ಉಡುಪಿ: ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಟ್ಟುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ  ಸಿಎಂ ಜೋಷಿ ಹೇಳಿದ್ದಾರೆ. ಅವರು ಭಾನುವಾರ,  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ವಕೀಲರ ಸಂಘ (ರಿ.) ಮತ್ತು ನಗರಸಭೆ ಉಡುಪಿ ಅವರ ಜಂಟಿ ಆಶ್ರಯದಲ್ಲಿ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ವಚ್ಛ ಭಾರತ ಅಭಿಯಾನ ಭಾರತ ಸರ್ಕಾರದ  ರಾಷ್ಟ್ರೀಯ ಸ್ವಚ್ಛತೆ ಆಂದೋಲನವಾಗಿದೆ, […]