ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆಯನ್ನು ವಹಿಸಿ: ಜಿಲ್ಲಾಧಿಕಾರಿ

ಉಡುಪಿ: ಬೇಸಿಗೆ ಹಿನ್ನಲೆಯಲ್ಲಿ ತುರ್ತು ಕುಡಿಯುವ ನೀರು ಪೂರೈಕೆ ಮತ್ತು ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಯಿತು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡುವ ಬಗ್ಗೆ ಪರಿಶೀಲಿಸಿ, ನಿಜವಾದ ಕಡೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಟ್ಯಾಂಕರ್‍ನ ಮೂಲಕ ಕುಡಿಯುವ ನೀರು ಸರಬರಾಜು ಮಾಡುವಂತೆ, ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆಯನ್ನು ವಹಿಸಿ ಕುಡಿಯುವ ನೀರಿನ ಸಮಸ್ಯೆ […]

ಲೋಕಸಭಾ ಚುನಾವಣೆ: ಮತದಾರರ ಗುರುತಿನ ಚೀಟಿ ಬದಲಿಗೆ ಪರಿಗಣಿಸುವ ಇನ್ನಿತರ ದಾಖಲೆಗಳು

ಉಡುಪಿ: ಲೋಕಸಭಾ ಚುನಾವಣೆಯಲ್ಲಿ ಮತದಾರರು ಮತದಾನಕ್ಕೆ ತೆರಳುವಾಗ ಭಾರತ ಚುನಾವಣಾ ಆಯೋಗವು ನೀಡಿದ ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ(ಎಪಿಕ್)ಯನ್ನು ತೋರಿಸಿ ಮತದಾನ ಮಾಡುವಂತೆ ತಿಳಿಸಲಾಗಿದ್ದು, ಒಂದು ವೇಳೆ ಗುರುತಿನ ಚೀಟಿ(ಎಪಿಕ್) ಹಾಜರುಪಡಿಸಲು ಅಸಾಧ್ಯವಾದಲ್ಲಿ ಮತದಾನದ ಗುರುತಿನ ಚೀಟಿ (ಎಪಿಕ್ ಕಾರ್ಡ್ ) ಬದಲು ಈ ಕೆಳಗಿನ 11 ವಿವಿಧ ಬಗೆಯ ದಾಖಲಾತಿಗಳ ಪೈಕಿ ಯಾವುದಾದರೂ ಒಂದು ದಾಖಲಾತಿಯನ್ನು ಹಾಜರು ಪಡಿಸಿ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ. ಪಾಸ್‍ಪೋರ್ಟ್, ಚಾಲನಾ ಪರವಾನಿಗೆ, […]

ಸಂಚಾರಿ ನಿಯಮ ಪಾಲನೆ ಪರಿಶೀಲನೆಗೆ ತಂಡ ರಚನೆ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವಿಕೆ, ಕಾರು ಚಾಲಕರು ಸೀಟ್ ಬೆಲ್ಟ್ ಧರಿಸುವಿಕೆ, ಚಾಲನಾ ಸಮಯದಲ್ಲಿ ಮೊಬೈಲ್ ಬಳಕೆ, ರೋಡ್‍ಕ್ರಾಸ್ ಮಾಡುವಾಗ ಪಾಲಿಸಬೇಕಾದ ನಿಯಮಗಳು ಸೇರಿದಂತೆ ಸಂಚಾರಿ ನಿಯಮಗಳ ಸಮರ್ಪಕ ಪಾಲನೆ ಕುರಿತಂತೆ ಪರಿಶೀಲಿಸಲು, ಎಪ್ರಿಲ್ ನಿಂದ 9 ತಿಂಗಳುಗಳ ಕಾಲ ಪರಿಶೀಲನೆಗೆ 9 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಿಂಗಳು 1 ತಂಡ ಕಾರ್ಯ ನಿರ್ವಹಿಸಲಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಉಡುಪಿ ಜಿಲ್ಲಾ ರಸ್ತೆ […]

ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಉಡುಪಿ: ಉಡುಪಿ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯು ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆಗಳು ನಡೆಯುವ ದಿನಗಳಂದು ಬೆಳಗ್ಗೆ 8 ರಿಂದ ರಾತ್ರಿ 6 ರ ವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲೂ ಹಾಗೂ ಸುತ್ತಲೂ […]

ಮತದಾನ ಜಾಗೃತಿ ಕಾರ್ಯಕ್ರಮಗಳ ವೇಳಾಪಟ್ಟಿ ತಯಾರಿಸಿ: ಸಿಂಧೂ ಬಿ ರೂಪೇಶ್ ಸೂಚನೆ

ಉಡುಪಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುವಾಗ ಎಲ್ಲಾ ಇಲಾಖೆಯವರು ತಾವು ಮುಂದಿನ ದಿನಗಳಲ್ಲಿ ನಡೆಸುವ ಕಾರ್ಯಕ್ರಮದ ವೇಳಾಪಟ್ಟಿಯ ತಯಾರಿಸಿ ಗುರುವಾರ ಸ್ವೀಪ್ ಸಮಿತಿಗೆ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷೆ ಸಿಂಧೂ ಬಿ. ರೂಪೇಶ್ ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಮುಂಬರುವ ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ವೀಪ್ ಸಮಿತಿಯ ವತಿಯಿಂದ ಕೈಗೊಳ್ಳಬೇಕಾದ ಮತದಾನ ಜಾಗೃತಿ ಕಾರ್ಯಕ್ರಮದ ಅನುಷ್ಟಾನ ಕುರಿತ ಸಭೆಯಲ್ಲಿ […]