ಅಂಗವಿಕಲರಿಗೆ ಸೌಲಭ್ಯ : ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ

ಉಡುಪಿ: ಅಂಗವಿಕಲರಿಗೆ ಸರಕಾರದಿಂದ ಲಭ್ಯವಿರುವ ಎಲ್ಲಾ ಯೋಜನೆಗಳ ಸೌಲಭ್ಯಗಳನ್ನು ಒದಗಿಸಿ ಅವರನ್ನು ಸಬಲರನ್ನಾಗಿ ಮಾಡುವಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ, ವ್ಯವಸ್ಥಿತ ರೀತಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ರಾಜ್ಯ ಅಂಗವಿಕಲರ ಅಧಿನಿಯಮದ ಆಯುಕ್ತ ಬಸವರಾಜ್ ತಿಳಿಸಿದ್ದಾರೆ. ಅವರು ಬುಧವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಕಲಚೇತನರಿಗೆ ಸೌಲಭ್ಯ ಒದಗಿಸಲು ಎಲ್ಲಾ ಇಲಾಖೆಗಳಲ್ಲಿ ಯೋಜನೆಗಳಿದ್ದು, ಅಧಿಕಾರಿಗಳು ಯೋಜನೆಗಳ ಕುರಿತು ವಿಕಲಚೇತನ ಫಲಾನುಭವಿಗಳಿಗೆ ಅರಿವು ಮೂಡಿಸಬೇಕು, […]

ಫೆ. 23ರಂದು ಧನುರಾಸನದಲ್ಲಿ ವಿಶ್ವ ದಾಖಲೆಗೆ ತನುಶ್ರೀ ಸಜ್ಜು

ಉಡುಪಿ: ಇಲ್ಲಿನ ಸೇಂಟ್‌ ಸಿಸಿಲೀಸ್‌ ಸಮೂಹ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಇದೇ 23ರಂದು ಸಂಜೆ 5ಗಂಟೆಗೆ ತನುಶ್ರೀ ಪಿತ್ರೋಡಿ ಅವರು ಯೋಗಾಸನದ ಭಂಗಿಯಾದ ‘ಧನುರಾಸನ’ವನ್ನು ಒಂದು ನಿಮಿಷದಲ್ಲಿ ಅತೀ ಹೆಚ್ಚು ಬಾರಿ ಮಾಡುವ ಮೂಲಕ ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್‌ನಲ್ಲಿ ಹೊಸ ದಾಖಲೆ ಬರೆಯಲು ಪ್ರಯತ್ನಿಸಲಿದ್ದಾರೆ. ಎಂದು ಬಡಗುಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್‌ ಸೊಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡಗುಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್‌ ಸೊಸೈಟಿ, ಪಿತ್ರೋಡಿಯ […]

ಫೆ.23 ರಂದು ಬೀದಿನಾಯಿಗಳ ಜಾಗೃತಿ ಅಭಿಯಾನ

ಉಡುಪಿ: ಬೀದಿ ನಾಯಿಮರಿಗಳಿಗೆ ಪುನವರ್ಸತಿ ಕಲ್ಪಿಸುವ ನಿಟ್ಟಿನಲ್ಲಿ ಆರಂಭಿಸಲಾದ ಮಲ್ಪೆ ಮಧ್ವರಾಜ್‌ ಅನಿಮಲ್‌ ಕೇರ್‌ ಟ್ರಸ್ಟ್‌ನ ಉದ್ಘಾಟನೆ ಹಾಗೂ ಬೀದಿ ನಾಯಿಗಳ ಕುರಿತ ‘ನಮ್ಮ ಸ್ವಂತ, ನಮ್ಮ ಹೆಮ್ಮೆ’ ಜಾಗೃತಿ ಅಭಿಯಾನ ಇದೇ 23ರಂದು ಸಂಜೆ 5.15ಕ್ಕೆ ಮಲ್ಪೆಯ ಕಡಲ ಕಿನಾರೆಯಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಟ್ರಸ್ಟಿ ಬಬಿತಾ ಮಧ್ವರಾಜ್‌ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಟಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡುವರು. ಮಾಜಿ ಸಚಿವ ಪ್ರಮೋದ್‌ […]

ಕೇಂದ್ರ ಸರ್ಕಾರ ಕೂಡಲೇ ಸ್ಪಂದಿಸಿ ದಾಳಿ ಮಾಡಿದವರಿಗೆ ತಕ್ಕ ಪಾಠ ಕಲಿಸಬೇಕು: ಪೇಜಾವರ ಶ್ರೀ

ಉಡುಪಿ: ಕೇಂದ್ರ ಸರ್ಕಾರ ಕೂಡಲೇ ಸ್ಪಂದಿಸಿ ದಾಳಿ ಮಾಡಿದವರಿಗೆ ತಕ್ಕ ಪಾಠ ಕಲಿಸಬೇಕು. ಯಾವುದೇ ಯುದ್ಧಕ್ಕೆ ಎಡೆಮಾಡಿಕೊಡಬಾರದು. ಸರ್ಜಿಕಲ್ ಸ್ಡ್ರೈಕ್ ಮಾಡಿದರೂ ಉತ್ತಮ.  ಯುದ್ಧ ನಡೆದರೆ ಎರಡು ದೇಶಗಳ ಅಮಾಯಕ ಜನರು ಹಾಗೂ ಯೋಧರು ಬಲಿಯಾಗುತ್ತಾರೆ. ಉಗ್ರರಿಗೆ ಶಾಕ್ ಕೊಡಲು ಪ್ರಧಾನಿ ತೀರ್ಮಾನ ಕೈಗೊಳ್ಳಬೇಕು. ರಾಮಮಂದಿರ ನಿರ್ಮಾಣ ವಿಚಾರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಸಂಘ ಪರಿವಾರದ ಹಿರಿಯ ಮುಖಂಡರು ನಾಲ್ಕು ತಿಂಗಳ ಕಾಲಾವಕಾಶ ಕೇಳಿದ್ದಾರೆ. ಚುನಾವಣಾ ಸಮಯವಾಗಿರುವುದರಿಂದ ರಾಮಮಂದಿರ ವಿಷಯ ಎತ್ತಿದರೆ ತಪ್ಪಾಗಬಹುದು. ಹಾಗಾಗಿ ಈ ತೀರ್ಮಾನಕ್ಕೆ ಬರಲಾಗಿದೆ. […]

ಹೊಲಸು ರಾಜಕಾರಣದಲ್ಲಿ ಪ್ರಾಮಾಣಿಕತೆ, ಹಿಂದುತ್ವಕ್ಕೆ ಜನ ಬೆಂಬಲ ಇಲ್ಲ: ಮುತಾಲಿಕ್

ಉಡುಪಿ: ಶ್ರೀರಾಮ ಸೇನೆ ಹಾಗೂ ನಾನು ರಾಜಕೀಯದಿಂದ ದೂರ ಸರಿದಾಗಿದೆ. ನಾವು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಹೊಲಸು ರಾಜಕಾರಣದಲ್ಲಿ ಪ್ರಾಮಾಣಿಕತೆ, ಹಿಂದುತ್ವಕ್ಕೆ ಜನ ಬೆಂಬಲ ಇಲ್ಲ. ಗೂಂಡಾಗಿರಿ ಮತ್ತು ದುಡ್ಡೇ ಪ್ರಮುಖ ಮಾನದಂಡವಾಗಿದೆ. ಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡುವುದಾಗಿ ಮುಂದಿನ ದಿನಗಳಲ್ಲಿ ತೀರ್ಮಾನಿಸುತ್ತೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಉಡುಪಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯ ರಾಜಕೀಯ ಕುಲಗೆಟ್ಟುಹೋಗಿದೆ. ಮೂರು ರಾಜಕೀಯ ಪಕ್ಷ ಗಳನ್ನು ಧಿಕ್ಕರಿಸಿ ಹೊಸ ಪಕ್ಷ ಕಟ್ಟುವ ಅನಿವಾರ್ಯತೆ […]