ಮೇ 20 ರಂದು ಅಲೆವೂರು ಗ್ರಾಮ ಪಂಚಾಯತ್ ಖಾಲಿ ಸ್ಥಾನಕ್ಕೆ ಚುನಾವಣೆ

ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಉಡುಪಿಯ ಅಲೆವೂರು ಗ್ರಾಮ ಪಂಚಾಯತ್ ನ 1 ಸ್ಥಾನಕ್ಕೆ ರಾಜ್ಯ ಚುನಾವಣಾ ಆಯೋಗವು ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದ್ದು, ಮೇ 5 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಮೇ 10 ಕೊನೆಯ ದಿನವಾಗಿದ್ದು, ಮೇ 11 ರಂದು ನಾಮಪತ್ರಗಳ ಪರಿಶೀಲನೆ, ಮೇ 13 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 20 ರಂದು ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಚುನಾವಣೆ ನಡೆಯಲಿದೆ. ಮೇ 22 ರಂದು […]

ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆ: ಶರ್ಮಿಳಾ ಎಸ್

ಉಡುಪಿ: ಬೇಸಿಗೆ ಶಿಬಿರಗಳು ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು, ಅನುಭವಿ ತರಬೇತುದಾರರಿಂದ ಉತ್ತಮ ತರಬೇತಿ ದೊರೆಯಲಿದೆ ಎಂದು ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಸದಸ್ಯ ಕಾರ್ಯದರ್ಶಿ ಶರ್ಮಿಳಾ. ಎಸ್ ಹೇಳಿದರು. ಅವರು ಇಂದು ಬಾಲಭವನ ಸೊಸೈಟಿ ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ನಡೆದ ಬೇಸಿಗೆ ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಬೇಸಿಗೆ ಶಿಬಿರವು ಮಕ್ಕಳ ಕಲಿಕಾ ಬೆಳವಣಿಗೆಗೆ […]

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ: ಕೂರ್ಮಾರಾವ್

ಉಡುಪಿ: ಪ್ರಸ್ತುತ ದೆಹಲಿ, ಹರಿಯಾಣ ಹಾಗೂ ಪಕ್ಕದ ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿಯೂ ಸಹ ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಕರಣಗಳ ಸಂಖ್ಯೆಗಳನ್ನು ಕಡಿಮೆಗೊಳಿಸುವುದು ಮತ್ತು ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸುವುದು ಅವಶ್ಯಕವೆಂದು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ. ಆದ್ದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕ, ಕಾರ್ಯನಿರ್ವಹಿಸುವ ಸ್ಥಳಗಳು ಹಾಗೂ ಸಂಚಾರದ ಸಮಯದಲ್ಲಿ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು. ಜೊತೆಗೆ ಸಾರ್ವಜನಿಕ […]

ರಂಗರಂಗು – ಮಕ್ಕಳ ಬೇಸಿಗೆ ಶಿಬಿರ

  ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಸೊಸೈಟಿ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆ (ರಿ) ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ರಂಗರಂಗು- ಮಕ್ಕಳ ಉಚಿತ ಬೇಸಿಗೆ ಶಿಬಿರವು ಮೇ 1 ರ ವರೆಗೆ ಕುಂದಾಪುರ ಬಾಲಭವನ ಸಭಾಭವನದಲ್ಲಿ ನಡೆಯಲಿದೆ. ಶಿಬಿರದಲ್ಲಿ 05 ರಿಂದ 16 ವರ್ಷದೊಳಗಿನ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು, ವಿಕಲಚೇತನರು, ಹೆಚ್.ಐ.ವಿ ಸೋಂಕು ಪೀಡಿತ ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ […]

ಆಕ್ಷೇಪಣೆ ಆಹ್ವಾನ

ಉಡುಪಿ: ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಇವರು ಮಣಿಪಾಲ-ಪೆರಂಪಳ್ಳಿ ರಸ್ತೆಯ 4 ನೇ ಅಡ್ಡ ರಸ್ತೆಯಲ್ಲಿರುವ ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯ ಶಾಖಾ ಕಟ್ಟಡಕ್ಕೆ ಹೋಗುವ ರಸ್ತೆಗೆ ಓಂ ಶಾಂತಿ ರಸ್ತೆ ಎಂದು ಹಾಗೂ ಅದಮಾರು ಮಠದ ನರಹರಿ ಪೀಠಮ್ ವ್ಯವಸ್ಥಾಪಕರು ದೀನದಯಾಳ್ ವೃತ್ತ ಚಿತ್ತರಂಜನ್ ಸರ್ಕಲ್‌ನಿಂದ ಹೋಟೆಲ್ ವುಡ್‌ಲ್ಯಾಂಡ್ ಮೂಲಕ ರಥಬೀದಿ ತಲುಪುವ ಮಾರ್ಗಕ್ಕೆ ಶ್ರೀ ಶ್ರೀ ವಿಭುಧಪ್ರಿಯ ಮಾರ್ಗ ಎಂದು ನಾಮಕರಣಗೊಳಿಸಲು ಉದ್ದೇಶಿಸಿರುತ್ತಾರೆ. ಈ ಕುರಿತು ಆಕ್ಷೇಪಣೆ ಅಥವಾ ಸಲಹೆಗಳಿದ್ದಲ್ಲಿ 30 ದಿನಗಳ ಒಳಗೆ ನಗರಸಭಾ […]