ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡದಕ್ಕೆ ಬೇಸರವಿಲ್ಲ- ಆದರೆ ಪಕ್ಷ ನಡೆಸಿಕೊಂಡ ರೀತಿಯ ಬಗ್ಗೆ ಬೇಸರವಿದೆ- ಬಿ.ಎಂ.ಸುಕುಮಾರ್ ಶೆಟ್ಟಿ

ಕುಂದಾಪುರ: ಈ ಬಾರಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡದಕ್ಕೆ ಬೇಸರವಿಲ್ಲ. ಮಾಡಿದ ಕೆಲಸಕ್ಕೆ ತೃಪ್ತಿಯಿದೆ. ಆದರೆ,ಟಿಕೆಟ್ ವಿಚಾರದಲ್ಲಿ ನಡೆಸಿಕೊಂಡ ರೀತಿಯ ಬಗ್ಗೆ ಬೇಸರವಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ಹೊರ ಹಾಕಿದರು. ಟಿಕೆಟ್ ನೀಡದ ಬಗ್ಗೆ ಮೊದಲೇ ತಿಳಿಸಬಹುದಿತ್ತು. ನಾನು ಬೆಂಬಲ ನೀಡುವ ಬಗ್ಗೆ ಕಾರ್ಯಕರ್ತರು, ಹಿತೈಷಿಗಳ ಜತೆಗೆ ಚರ್ಚಿಸಿ ಇನ್ನೆರಡು ದಿನದಲ್ಲಿ ನನ್ನ ನಿಲುವು ಏನು ಎಂಬುದನ್ನು ತಿಳಿಸುತ್ತೇನೆ. ಬಿಜೆಪಿಯಲ್ಲಿಯೇ ಇರುತ್ತೇನೆ ಇದರಲ್ಲಿ ಸಂಶಯವೇ ಬೇಡ ಎಂದು ತಿಳಿಸಿದರು. ಈಗಿನ […]