ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ, ಜೆಡಿಎಸ್- ಕಾಂಗ್ರೆಸ್ ಒಮ್ಮತದ ಅಭ್ಯರ್ಥಿ ಕಣಕ್ಕೆ: ಯೋಗೀಶ್ ಶೆಟ್ಟಿ

ಉಡುಪಿ: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವಿನ ಸೀಟು ಹಂಚಿಕೆ ಒಪ್ಪಂದಂತೆ ಉಡುಪಿ–ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್‌ಗೆ ಪಾಲಾಗಿದೆ. ಅಭ್ಯರ್ಥಿಯ ಆಯ್ಕೆ ವಿಚಾರದಲ್ಲಿ ಎರಡು ಪಕ್ಷಗಳ ನಡುವೆ ಯಾವುದೇ ಭಿನ್ನಮತವಿಲ್ಲ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಿ, ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದರು. ಹಾಲಿ ಸಂಸದೆ ಶೋಭಾ ಕೆರಂದ್ಲಾಜೆ […]