ಜೆ.ಪಿ.ನಡ್ಡಾ ರಾಜೀನಾಮೆಗೆ MLC ಮಂಜುನಾಥ ಭಂಡಾರಿ ಆಗ್ರಹ..!!

ಉಡುಪಿ: ಕೇಂದ್ರ ಸರಕಾರದ ಅನುದಾನವನ್ನು ಕಡಿತಗೊಳಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಹೇಳಿಕೆ ಸಂವಿಧಾನ ವಿರೋಧಿಯಾಗಿದ್ದು, ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಆಗ್ರಹಿಸಿದರು. ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹೇಳಿಕೆ ರಾಜ್ಯಗಳಿಗೆ ಬೆದರಿಕೆ ಒಡ್ಡುವ ರೀತಿಯಲ್ಲಿದೆ. ಹಾಗೆಯೇ ಈ ಹೇಳಿಕೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಕರ್ನಾಟಕದ ಜನತೆ ಬಿಜೆಪಿಗೆ ತಕ್ಕ […]