ಉಡುಪಿ ಜಿಲ್ಲೆಗೆ ವಿದೇಶ,ಹೊರ ರಾಜ್ಯಗಳಿಂದ ಬಂದಿರುವ ವ್ಯಕ್ತಿಗಳು 14 ದಿನ ಹೋಂ ಕ್ವಾರಂಟೈನ್ ಮಾಡಲೇಬೇಕು: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಗೆ ವಿದೇಶ,ಹೊರ ರಾಜ್ಯಗಳಿಂದ ಬಂದಿರುವ ವ್ಯಕ್ತಿಗಳು ಹಾಗೂ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಅವರು 14 ದಿನ ಹೋಂ ಕ್ವಾರಂಟೈನ್ ನಲ್ಲಿ ಇರುವುದು ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ. ಆದರೆ ಕೆಲವರು ನಿಯಮ ಬಾಹಿರವಾಗಿ ಹೊರಗಡೆ ತಿರುಗುತ್ತಿರುವುದು ಕಂಡುಬಂದಿರುತ್ತದೆ. ಇದರಿಂದಾಗಿ ಕೋವಿಡ್ ರೋಗ ನಿಯಂತ್ರಣದಲ್ಲಿ ಹಿನ್ನಡೆಯಾಗುತ್ತಿದೆ. ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ದ ನಿಗಾ ಇಡಲು Quarantine Watch App ತಂತ್ರಜ್ಞಾನದ ಬಳಕೆಯಾಗುತ್ತಿದ್ದು, ಇದರಿಂದಾಗಿ ಹೋಂ […]